ದಿನದ ಸುದ್ದಿ

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪಿ.ಯು.ಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಶುಲ್ಕ ಮರು ಪಾವತಿ ಯೋಜನೆಯಡಿ ರಾಜ್ಯತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆದು, https://ssp.postmatric. karnataka.gov.in ಮೂಲಕ ಆನ್‍ಲೈನ್‍ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022, 250066 ಸಂಪರ್ಕಿಸಬೇಕೆಂದು ಇಲಾಖೆಯ ಜಿಲ್ಲಾ ಅಧಿಕಾರಿ ಭಕ್ತ ಮಾರ್ಕಂಡೇಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version