Connect with us

ಕ್ರೀಡೆ

ಮೆಸ್ಸಿ ದಂಪತಿಯ ಹಾಟ್ ಚಿತ್ರಗಳು !

Published

on

ಸುದ್ದಿದಿನ ಡೆಸ್ಕ್: ಸದ್ಯ ಜಗತ್ತಿನಾದ್ಯಂತ ಫಿಫಾ ವಿಶ್ವ ಕಪ್ ಫುಟ್ಬಾಲ್ ಜ್ವರ ಆವರಿಸಿದೆ. ತಮ್ಮ ನೆಚ್ಚಿನ ಆಟಗಾರತ ಬಗ್ಗೆ ಅಸಂಖ್ಯಾತ ಅಭಿಮಾನಿಗಳ ಕಣ್ಣು ನೆಟ್ಟಿರುತ್ತೆ. ತಮ್ಮ ಆಟಗಾರ ಮಾಡುವ ಪ್ರತಿ ಕಾರ್ಯವು ಅಭಿಮಾನಿಗಳಿ ಅಚ್ಚುಮೆಚ್ಚಿನ. ಸದ್ಯ ಖ್ಯಾತ ಆಟಗಾರ ಲಿಯೋನೆಲ್ ಮೆಸ್ಸಿ ಹಾಗೂ ಆತನ ಪತ್ನಿ ಜತೆಗಿನ ಹಾಟ್ ಫೋಟೊಗಳು ಇಂಟರ್ನೆಟ್ ತುಂಬಾ ವೈರಲ್ ಆಗಿವೆ. ಕಳೆದ ವರ್ಷ ಜನವರಿಯಲ್ಲಿ ತನ್ನ ಬಾಲ್ಯದ ಗೆಳತಿ ಆಂಟೋನೆಲ್ಲಾ ರೊಕ್ಕುಸೊ ವಿವಾಹವಾಗಿದ್ದರು. ಸದ್ಯ ಈ ಜೋಡಿಯ ಹಾಟ್ ಫೋಟೊಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

 

FIFA World Cup 2018: Lionel Messi and Antonella Roccuzzo – too-hot-to-handle pics of the celebrity couple

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಟಿ-20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ದೆಹಲಿಗೆ ಆಗಮನ ; ಸಂಜೆ ರೋಡ್ ಶೋ

Published

on

ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್‌ನಿಂದ ತಂಡವು ಹಿಂತಿರುಗಿತು.

ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡದ ಆಗಮನ ವಿಳಂಬವಾಯಿತು. ರಾಷ್ಟ್ರದ ರಾಜಧಾನಿಯಲ್ಲಿ ಭಾರತೀಯ ತಂಡವನ್ನು ಸ್ವಾಗತಿಸಲು ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಮುಂಬೈಗೆ ತೆರಳುವ ಮುನ್ನ ಭಾರತ ತಂಡ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದೆ.

ಚಾಂಪಿಯನ್ ತಂಡ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್‌ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ -ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.

ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ. ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

11 ವರ್ಷಗಳ ನಂತರ ಭಾರತ ತಂಡಕ್ಕೆ ಐಸಿಸಿ ಟಿ-20 ವಿಶ್ವಕಪ್ ಕಿರೀಟ ; ಗಣ್ಯರ ಮೆಚ್ಚುಗೆ

Published

on

ಸುದ್ದಿದಿನಡೆಸ್ಕ್:ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ, 17 ವರ್ಷಗಳ ನಂತರ ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆದ್ದಸಾಧನೆ ಮಾಡಿದೆ.

ಭಾರತ ನೀಡಿದ 177 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತಗೊಂಡಿತು. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 52 ರನ್ ಗಳಿಸಿದರೆ, ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 3, ಜಸ್ ಪ್ರಿತ್ ಬುಮ್ರಾ ಮತ್ತು ಅರ್ಷ್ ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.

ಟೂರ್ನಿಯಲ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಸಹಜವಾಗಿಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಹಾಗೆಯೇ 8 ಪಂದ್ಯಗಳಿಂದ 15 ವಿಕೆಟ್ ಉರುಳಿಸಿದ ವೇಗಿ ಜಸ್ ಪ್ರಿತ್ ಬುಮ್ರಾ ಟೂರ್ನಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. 2007ರ ನಂತರ ಭಾರತ ಟಿ20 ವಿಶ್ವಕಪ್ ಗೆದ್ದರೆ, 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಐಸಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ.

ಈ ಮಧ್ಯೆ, ಭಾರತ ತಂಡ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕ್ರಿಕೆಟ್ ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಪ್ರಕಟಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending