ಕ್ರೀಡೆ
ಫಿಫಾ ವಿಶ್ವಕಪ್ ಫುಟ್ಬಾಲ್ : ಇರಾನ್ ತಂಡ ಮಣಿಸಿದ ಸ್ಪೇನ್
ಸುದ್ದಿದಿನ,ಮಾಸ್ಕೋ : ಇರಾನ್ ಮತ್ತು ಸ್ಪೇನ್ ತಂಡಗಳು ಬುಧವಾರ ಫಿಫಾ ವಿಶ್ವಕಪ್ ಪಂದ್ಯಕ್ಕಾಗಿ ಬಿ ಗ್ರೂಪ್ ನಿಂದ ಕಣಕ್ಕಿಳಿದು ಸೆಣಸಾಡಿದವು. ಈ ಸೆಣಸಾಟದಲ್ಲಿ ಸ್ಪೇನ್ 1-0ಯ ಗೆಲುವನ್ನು ಸಾಧಿಸಿದೆ. 54 ನೇ ನಿಮಿಷದಲ್ಲಿ ಡಿಯಾಗೋ ಕೋಸ್ಟ ಅವರು ಸಿಡಿಸಿದ ಗೋಲ್ ಸ್ಪೇನ್ ಗೆ ಗೆಲುವು ತಂದು ಕೊಟ್ಟಿದೆ.
#FIFAWorldCup2018 Diego Costa scores in the 54th minute as Spain beat Iran 1-0 in a Group B match. https://t.co/NBQrjPL5xT pic.twitter.com/pTKvmXMKN8
— The Quint (@TheQuint) June 20, 2018
ಇರಾನ್ – ಸ್ಪೇನ್ ನ ನಡುವಿನ ಕಾದಾಟದಲ್ಲಿ ಪಂದ್ಯದ ಮೊದಲಾರ್ಧ ಕೊನೆಯವರೆಗೂ ಗೋಲ್ ಧಾಖಲಾಗದೆ ಎರಡೂ ತಂಡಗಳು ಸಮಬಲ ಸಾಧಿಸಿದವು. ಗೋಲ್ ಗಾಗಿ ಎರಡೂ ತಂಡಗಳು ನಡೆಸಿದ ಸೆಣಸಾರ ರೋಚಕವಾಗಿತ್ತು.
Spain beat Iran 1-0 to close in on World Cup last 16 pic.twitter.com/tXZOzIfxDm
— The Gulf Today (@thegulftoday) June 20, 2018
Spain beat Iran 1-0 in the World Cup Group B match#ESPIRA pic.twitter.com/BIuUsEh1Ji
— The Gulf Today (@thegulftoday) June 20, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಕ್ರಿಕೆಟಿಗ ಸುರೇಶ್ ರೈನಾ ಬಂಧನ ; ಬಿಡುಗಡೆ : ಕಾರಣ..!?

ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು.
ಕೋವಿಡ್ -19 ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳಿದ್ದಾರೆ.
ಬಂಧಿತರ ಮೇಲೆ ಮೇಲೆ ಐಪಿಸಿ ಸೆಕ್ಷನ್ 188, 269, 34 ಅಡಿಯಲ್ಲಿ ಕೇಸು ದಾಖಲು ಮಾಡಿದ್ದು, ಸದ್ಯ ಬಂಧಿತ ಆರೋಪಿಗಳನ್ನು ಜಾಮೀನಿ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ..!

ಸುದ್ದಿದಿನ, ದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರು ಮಾಹಿತಿ ದೊರೆತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಬೇಕಾಗಿದೆ. ಮಾಜಿ ನಾಯಕ ಕಪಿಲ್ ದೇವ್ ಅವರು 1983ರಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ ತಂದು ಕೊಟ್ಟಿದ್ದರು. ಕಪಿಲ್ ದೇವ್ 131 ಟೆಸ್ಟ್ ಪಂದ್ಯದಲ್ಲಿ 434 ವಿಕೆಟ್ ಪಡೆದ ಭಾರತದ ಕ್ರಿಕೆಟ್ ತಂಡದ ಮುಖ್ಯ ವೇಗಿಯಾಗಿದ್ದರು.
Legendary cricketer Kapil Dev @therealkapildev suffers heart attack, undergoes angioplasty at a hospital in Delhi. Wishing him a speedy recovery.
— Teena Thacker (@Teensthack) October 23, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ದಿನದ ಸುದ್ದಿ7 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ3 days ago
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ
-
ದಿನದ ಸುದ್ದಿ7 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!