ಕ್ರೀಡೆ
ತೀವ್ರ ಕುತೂಹಲ ಕೆರಳಿಸಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಐದನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯ
ಸುದ್ದಿದಿನ ಡೆಸ್ಕ್ : ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಐದನೇ ಹಾಗೂ ಅಂತಿಮ ಟಿ-20 ಕ್ರಿಕೆಟ್ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ.
ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಸದ್ಯ ಉಭಯ ತಂಡಗಳು 2-2 ರಲ್ಲಿ ಸಮಬಲದ ಹೋರಾಟ ನೀಡಿವೆ. ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ್ದ ಭಾರತ, ನಂತರದ ಎರಡು ಪಂದ್ಯಗಳಲ್ಲಿ ಜಯ ಗಳಿಸಿದ್ದು, ನಿರ್ಣಾಯಕ ಪಂದ್ಯದಲ್ಲೂ ಗೆಲುವಿನ ಲಯ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.
ಉಭಯ ತಂಡಗಳ ಒಟ್ಟು 19 ಪಂದ್ಯಗಳ ಮುಖಾಮುಖಿಗಳಲ್ಲಿ 11ರಲ್ಲಿ ಭಾರತ ಜಯ ಗಳಿಸಿದರೆ, ೮ರಲ್ಲಿ ದಕ್ಷಿಣ ಆಫ್ರಿಕಾ ಗೆಲುವು ದಾಖಲಿಸಿದೆ. ಭಾರತ 2019 ರಿಂದ ತವರಿನಲ್ಲಿ ದ್ವಿಪಕ್ಷೀಯ ಟಿ-20 ಸರಣಿಯಲ್ಲಿ ಸೋತಿಲ್ಲ. ಹಾಗೆಯೇ ದಕ್ಷಿಣ ಆಫ್ರಿಕಾ 2011ರಿಂದ ಭಾರತದಲ್ಲಿ ಯಾವುದೇ ಮಾದರಿಯ ಸರಣಿ ಸೋತಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಐದನೇ ಪಂದ್ಯ ನಿರ್ಣಾಯಕವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243