ದಿನದ ಸುದ್ದಿ
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
ಸುದ್ದಿದಿನ ಡೆಸ್ಕ್ : ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಅವುಗಳಿಗೆ ಕಾಯಿಲೆ ಕಾಣಿಸಿಕೊಂಡಾಗ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ಅವಕಾಶ ಕಲ್ಪಿಸಿದ್ದು ನಮ್ಮ ಸರ್ಕಾರ. ಇದರ ಜೊತೆಗೆ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ರಚನೆಯಾಗಿದ್ದೂ ನಮ್ಮ ಸರ್ಕಾರದ ಅವಧಿಯಲ್ಲಿ ಎಂದರು.
ಇದನ್ನೂ ಓದಿ | ಅಧಿಕಾರಿಗಳ ನಿರ್ಲಕ್ಷ್ಯ; ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲೇ ಓಪನ್ ಆಗಿದೆ ಡ್ರೈನೇಜ್ , ಆಪಾಯ ಕಟ್ಟಿಟ್ಟ ಬುತ್ತಿ..!
ಕುರಿ, ಮೇಕೆ, ದನ ಮತ್ತು ಎಮ್ಮೆಗಳು ಸಾವಿಗೀಡಾದಾಗ ಅದರ ಮಾಲೀಕರಿಗೆ ನೆರವಾಗುವ ದೃಷ್ಟಿಯಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷದಿಂದ ಯೋಜನೆ ಸ್ಥಗಿತಗೊಳಿಸಿದೆ ಹಾಗೂ ರೂ.30 ಕೋಟಿ ಬಾಕಿಯನ್ನೂ ಪಾವತಿ ಮಾಡಿಲ್ಲ ಎಂದು ಕಿಡಿಕಾರಿದರು.
ಕುರಿ ಸಾಕಾಣಿಕೆ ಈಗ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ 500 ಕುರಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಕುರಿ ಸಾಕಣೆ ಎಂಬುದು ಬದುಕಿಗೆ ಒಂದು ದಾರಿ.
ಒಂದು ಕುರಿಗೆ ಹತ್ತರಿಂದ ಇಪ್ಪತ್ತು ಸಾವಿರ ರೂ.ಗಳ ಬೆಲೆಯಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿಹೋಗುತ್ತದೆ. ಹಾಗಾಗಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು ಹತ್ತು ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


