ದಿನದ ಸುದ್ದಿ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಅಕ್ಟೋಬರ್ 2 ರಂದು ಚಾಲನೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ರಾಜ್ಯಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಪ್ರಥಮ ಬಾರಿಗೆ ಆಯವ್ಯಯದಲ್ಲಿ 1 ಲಕ್ಷದ 50 ಸಾವಿರ ರೂಪಾಯಿ ನೆರವು, ಯಂತ್ರೋಪಕರಣ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು ಎಂದರು.
ಒಂದು ಸ್ತ್ರೀ ಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ರೂಪಾಯಿ ವಹಿವಾಟು ನಡೆಸುತ್ತಿದೆ. ಇದು ಸಂಘಟಿತವಾದ ಶ್ರಮದ ಶಕ್ತಿ ಎಂದು ತಿಳಿಸಿದ ಮುಖ್ಯಮಂತ್ರಿ, ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸ್ತ್ರೀಶಕ್ತಿ ಸಬಲೀಕರಣ ಆಗಬೇಕು ಎಂದು ಹೇಳಿದರು.
ಸ್ಥಳೀಯ ಕುಶಲಕರ್ಮಿಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಸರ್ಕಾರ ಮಹಿಳೆಯರಿಗೆ ರೂಪಿಸಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243