Connect with us

ದಿನದ ಸುದ್ದಿ

ಕಲ್ಲು ಕ್ವಾರಿ ವಿರುದ್ದ ಎಫ್‍ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ

Published

on

ಸುದ್ದಿದಿನ,ದಾವಣಗೆರೆ : ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಖನಿಜ ಪ್ರತಿಷ್ಟಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್‍ಗಳು ಒಂದೂವರೆ ತಿಂಗಳು ಸ್ಟೋರೇಜ್ ಇರುವ ಸಿಸಿ ಕ್ಯಾಮೆರಾ ಅಳವಡಿಸಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಬೇಕು. ಪೊಲೀಸರು ಟಾಸ್ಕ್‍ಪೋರ್ಸ್ ಸಮಿತಿಗೆ ಈ ಕುರಿತು ವರದಿ ಮಾಡಬೇಕೆಂದರು.

ಗ್ರಾಮಾಂತರ ಉಪವಿಭಾಗದ ಡಿವೈಎಸ್‍ಪಿ ನರಸಿಂಹ ವಿ.ತಾಮ್ರಧ್ವಜ ಮಾತನಾಡಿ, ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು, ಕಂಟ್ರಾಕ್ಟರ್ ಸಿಸಿ ಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನೆಟ್‍ವರ್ಕ್ ವಿಡಿಯೋ ರೆಕಾರ್ಡಿಂಗ್(ಎನ್‍ವಿಆರ್)ವ್ಯವಸ್ಥೆ ಮೂಲಕ ಕೂತಿರುವಲ್ಲೇ ಸ್ಥಳದ ಘಟನಾವಳಿಯನ್ನು ವೀಕ್ಷಿಸಬಹುದಾಗಿದೆ ಎಂದರು.

ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿ, ಚಿಕ್ಕಬಿದರಿ, ಅಚ್ಯುತಪುರ, ಹಿರೇಬಾಸೂರು, ರಾಂಪುರ, ಕುರುಡಿಹಳ್ಳಿ ಇತರೆಡೆ ಹಾಗೂ ಹರಿಹರ ತಾಲ್ಲೂಕಿನ ಸಾರತಿ, ರಾಜನಹಳ್ಳಿ, ಬಿಳಸನೂರು ಸೇರಿದಂತೆ ಅಧಿಕೃತ ಮರಳು ಬ್ಲಾಕ್‍ಗಳು ಇರುವೆಡೆ ಟಾಸ್ಕ್‍ಫೋರ್ಸ್ ಸಮಿತಿಯ ಅಧಿಕಾರಿಗಳು ರಾತ್ರಿ ವೇಳೆ ಓಡಾಡಿ, ಪರಿಶೀಲನೆ ನಡೆಸಬೇಕು. ಅನಧಿಕೃತ ಚಟುವಟಿಕೆ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ | ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ

ಪರ್ಮಿಟ್ ಇಲ್ಲದೇ ಮರಳು ಸಾಗಿಸುವುದು, ಸಂಗ್ರಹಿಸುವುದರ ವಿರುದ್ದ ದಂಡ ಹಾಕಬೇಕು. ಬಂಡಿಗಳಲ್ಲಿ ಮನೆ ಉದ್ದೇಶಕ್ಕೆ ಮರಳು ಉಪಯೋಗಿಸಬಹುದು. ಆದರೆ ವ್ಯವಹಾರಕ್ಕೆ ಬಳಸಿಕೊಳ್ಳಬಾರದು. ಚಕ್ಕಡಿ ಸೇರಿದಂತೆ ಇತರೆ ದೊಡ್ಡ ವಾಹನಗಳು ಒಂದು ಪರ್ಮಿಟ್ ಪಡೆದು ಅನಧಿಕೃತವಾಗಿ ಬಹಳಷ್ಟು ಮರಳು ಹೊಡೆದು ಸರ್ಕಾರಕ್ಕೆ ರಾಜಧನ ನೀಡದೇ ಹಾನಿ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು ಇಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತ ಚಟುವಟಿಕೆಯನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗೂ ನಿಯಮಾನುಸಾರ ದಂಡ ಸಂಗ್ರಹ ಮಾಡುವಂತೆ ಸೂಚನೆ ನೀಡಿದರು.

ಅಕ್ರಮ ಮರಳು ಬಳಕೆ ತಡೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸ್ಕ್ವಾಡ್ ತಂಡಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಎಸಿಯವರು ಈ ಬಗ್ಗೆ ಸಭೆ ಕರೆದು ಸೂಚನೆಗಳನ್ನು ನೀಡಬೇಕೆಂದರು.

ಆರ್‍ಟಿಓ ಶ್ರೀಧರ್ ಮಲ್ಲಾಡ್ ಮಾತನಾಡಿ, ರಸ್ತೆಯಲ್ಲಿ ಸ್ಪೀಡ್ ಕಂಟ್ರೋಲರ್ ಮತ್ತು ಜಲ್ಲಿ ಮತ್ತು ಮರಳು ಗಾಡಿಗಳಿಂದ ಹಿಂದಿನ ಗಾಡಿಗಳಿಗೆ ಜಲ್ಲಿ ಮರಳು ಸಿಡಿದು ಹಾನಿಯಾಗುವುದನ್ನು ತಪ್ಪಿಸಲು ಟಾರ್ಪಲಿನ್ ಕವರ್ ಮಾಡಿಕೊಂಡು ಹೋಗುವ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಲೋಡ್ ಆದ ವಾಹನಗಳು ಸೇರಿದಂತೆ ಇತರೆ ವಾಹನಗಳಿಗೂ ಸ್ಪೀಡ್ ಕಂಟ್ರೋಲರ್ ಅಳವಡಿಸಲು ಆರ್‍ಟಿಓ ಕ್ರಮ ವಹಿಸುವಂತೆ ಹಾಗೂ ಟಾರ್ಪಲಿನ್ ಕವರ್ ಮಾಡದಿದ್ದರೆ ದಂಡ ಹಾಕುವಂತೆ ಜೊತೆಗೆ ಟಾರ್ಪಲಿನ್ ಕವರ್ ಮಾಡುವ ಮೂಲಕ ಇತರೆ ವಾಹನಗಳಿಗೆ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಲ್ಲು ಕ್ವಾರೆ ನಿರ್ವಹಣೆ ಬಗ್ಗೆ ಸೂಚನೆ

ನಿಯಮ ಮೀರಿ ಯಾವುದೇ ರೀತಿಯ ಕಾನೂನು ಬಾಹಿರ ಕಲ್ಲುಕ್ವಾರೆ ಮಾಡುವಂತಿಲ್ಲ. ಲೈಸನ್ಸ್‍ನಲ್ಲಿ ಇರುವ ಷರತ್ತು ಮತ್ತು ನಿಯಮಗಳಿಗೆ ಅನುಗುಣವಾಗಿ ಕಲ್ಲು ಕ್ವಾರೆ ನಡೆಸಬೇಕು. ಸ್ಪೋಟಕವಾಗುವ ಸ್ಥಳದ 15 ಮೀಟರ್ ಒಳಗೆ ಧೂಮಪಾನ ನಿಷೇಧ. 24 ಗಂಟೆ ಭದ್ರತಾ ಸಿಬ್ಬಂದಿ ನೇಮಕ, ಸ್ಪೋಟಕ ವ್ಯಾನ್ ಹೆಚ್ಚಿನ ಸಮಯದವರೆಗೆ ಸಾರಿಗೆ ರಸ್ತೆಯಲ್ಲಿ ನಿಲ್ಲಿಸಬಾರದು.

ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೆ ಸ್ಪೋಟಕಗಳನ್ನು ಸಾಗಿಸಬಾರದು. ಸಿಸಿ ಕ್ಯಾಮೆರಾ ನಿರಂತರ ನಿರ್ವಹಿಸುವಂತೆ ಕ್ರಮ ಸೇರಿದಂತೆ ಇನ್ನಿತರೆ ಮುಖ್ಯವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.

ಎಫ್‍ಐಆರ್ ದಾಖಲು

ಗ್ರಾಮಾಂತರ ಡಿವೈಎಸ್‍ಪಿ ನರಸಿಂಹ ತಾಮ್ರಧ್ವಜ ಮಾತನಾಡಿ, ಕಲ್ಲುಕ್ವಾರಿಯಲ್ಲಿ ಅನಧಿಕೃತ ಎಲೆಕ್ಟ್ರಿಕ್ ಡಿಟೋನೇಷನ್ ಇರುವ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿರುವ ಬಗ್ಗೆ ಮಾತನಾಡಿ, ಈ ಸಂಬಂಧ ಎಫ್‍ಐಆರ್ ದಾಖಲು ಮಾಡಲಾಗಿದೆ. ಎಕ್ಸ್‍ಪ್ಲೊಸಿವ್ ಸಬ್‍ಸ್ಟೆನ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನೆಗಳೂರಿನ ಲಿಂಗನಗೌಡ ಎಂಬುವವರು ಆಲೂರುಹಟ್ಟಿ ಗ್ರಾಮದ ಕುಮಾರನಾಯ್ಕ ಎಂಬುವವರ ಕಲ್ಲು ಕ್ವಾರಿಯ ಬಗ್ಗೆ ನೀಡಲಾದ ದೂರಿನನ್ವಯ ಪೋಲೀಸ್ ಉಪಾಧೀಕ್ಷಕರು, ಪಿಎಸ್‍ಐ, ಭೂವಿಜ್ಞಾನಿಗಳು, ಬ್ಲಾಸ್ಟಿಂಗ್ ತಜ್ಞರು ಸ್ಥಳ ಪರಿಶೀಲನೆ ನಡೆಸಿದಾಗ ಕಲ್ಲು ಕ್ವಾರಿಯನ್ನು ನಡೆಸುತ್ತಿರುವ ಆಲೂರು ಗ್ರಾಮದ ಸರ್ವೇ ನಂ.68/9 ರಲ್ಲಿ ಒಂದು ಜೀವಂತ ಎಲೆಕ್ಟ್ರಿಕ್ ಡಿಟೋನೇಟರ್ ಪತ್ತೆಯಾಗಿದ್ದು ಪಂಚನಾಮೆಯನ್ನು ಜರುಗಿಸಿ ಡಿಟೋನೇಟರ್‍ನ್ನು ಅಮಾನತ್ತುಪಡಿಸಿಕೊಂಡು ಅದನ್ನು ಸುರಕ್ಷತೆ ದೃಷ್ಟಿಯಿಂದ ಕಾಡಜ್ಜಿ ಗ್ರಾಮದಲ್ಲಿರುವ ಮ್ಯಾಗ್ಜಿನ್‍ನಲ್ಲಿ ಇಡಲು ಕ್ರಮ ವಹಿಸಲಾಗಿದೆ. ಹಾಗೂ ಈ ದೂರಿನನ್ವಯ ಸೂಕ್ತ ಕ್ರಮ ಕೈಗೊಳ್ಳಲು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಡಿಸಿ ಯವರು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಇಓ, ಟಿಹೆಚ್‍ಓ ಮತ್ತು ತಹಶೀಲ್ದಾರರು ನಿಯಮಿತವಾಗಿ ಕೋವಿಡ್ ಟಾಸ್ಕ್‍ಫೋರ್ಸ್ ಸಮಿತಿ ಸಭೆ ನಡೆಸಬೇಕು. ಕೋವಿಡ್ ಎರಡನೇ ಅಲೆ ಬಾರದಿರಲಿ. ಸ್ವಯಂ ನಿಯಂತ್ರಣ ಹೇರಿಕೊಳ್ಳುವುದು ಅತಿ ಮುಖ್ಯ ಎಂದು ಸೂಚಿಸಿದರು.

ಶಿಷ್ಟಾಚಾರ ಪಾಲಿಸುವಂತೆ ಸೂಚನೆ

ಸರ್ಕಾರದ ಕಾರ್ಯದರ್ಶಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರಿ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಕಡ್ಡಾಯವಾಗಿ ಶಿಷ್ಚಾಚಾರ ಪಾಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಒಳಗೊಂಡಂತೆ ಸರ್ಕಾರದ ಆ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಯ ಸಚಿವರ ಸಮಾಲೋಚನೆಯೊಂದಿಗೆ ನಿಗದಿಪಡಿಸಿ ಕಾರ್ಯಕ್ರಮವನ್ನು ಏರ್ಪಡಿಸತಕ್ಕದ್ದು. ಸರ್ಕಾರಿ ಕಾರ್ಯಕ್ರಮ ನಡೆಸಲು ಕನಿಷ್ಟ ಪಕ್ಷ 7 ದಿನಗಳ ಸಮಯಾವಕಾಶವನ್ನು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೋರಬೇಕು ಎಂದು ತಿಳಿಸಿರುತ್ತಾರೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಹಿರಿಯ ಭೂವಿಜ್ಞಾನಿ ಕೋದಂಡರಾಮ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಡಿಹೆಚ್‍ಓ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಡಿಡಿ ವಿಜಯಕುಮಾರ್, ಇತರೆ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending