Connect with us

ದಿನದ ಸುದ್ದಿ

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

Published

on

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ ಆಚರಿಸುವ ಮಹತ್ವದ ಕ್ಷಣವಾಗಿದೆ ಎಂದು ಜಿಎಂ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಎಸ್.ಆರ್. ಶಂಕಪಾಲ್ ತಿಳಿಸಿದರು.

ಜಿಎಂ ವಿಶ್ವವಿದ್ಯಾಲಯದ ಸಮ್ಮೇಳನ ಕೊಠಡಿಯಲ್ಲಿ ನಡೆದ ಸುದ್ದಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧೀನದಲ್ಲಿನ ಮೂರು ಸ್ನಾತಕೋತ್ತರ ವಿಭಾಗಗಳ ಒಟ್ಟು 318 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದವಿಗಳನ್ನು ಪ್ರದಾನ ಮಾಡಲಾಗುವುದು. ಇದರಲ್ಲಿ ಎಂಬಿಎ ವಿಭಾಗದ 263 ವಿದ್ಯಾರ್ಥಿಗಳು, ಎಂಸಿಎ ವಿಭಾಗದ 44 ವಿದ್ಯಾರ್ಥಿಗಳು ಹಾಗೂ ಎಂಕಾಂ ವಿಭಾಗದ 11 ವಿದ್ಯಾರ್ಥಿಗಳು ಸೇರಿದ್ದಾರೆ. ಈ ಪದವಿ ಪ್ರದಾನವು ವರ್ಷಗಳ ಪರಿಶ್ರಮದ ಪರಾಕಾಷ್ಠೆಯಾಗಿದ್ದು, ಅವರ ವೃತ್ತಿಪರ ಹಾಗೂ ಶೈಕ್ಷಣಿಕ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದರು.

ಈ ವೈಭವಯುತ ಘಟಿಕೋತ್ಸವ ಸಮಾರಂಭವು ಜನವರಿ 11, 2026 ರಂದು ಬೆಳಿಗ್ಗೆ 10:30 ಗಂಟೆಗೆ, ಜಿಎಂಯು ಕ್ಯಾಂಪಸ್‌ನಲ್ಲಿರುವ ಜಿಎಂ ಹಾಲಮ್ಮ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಉಪಗ್ರಹ ಕೇಂದ್ರದ ಮಾಜಿ ನಿರ್ದೇಶಕರಾದ ಡಾ. ಮೈಲ್‌ಸ್ವಾಮಿ ಅಣ್ಣಾದೊರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಡಾ. ಜಿ.ಎಂ. ಸಿದ್ದೇಶ್ವರ್ ಅವರು ಅತ್ಯುತ್ತಮ ಶೈಕ್ಷಣಿಕ ಸಾಧನೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಎಂ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಶ್ರೀ ಜಿ. ಎಂ. ಲಿಂಗರಾಜು ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಕುಲಪತಿಗಳಾದ ಡಾ. ಎಸ್. ಆರ್. ಶಂಕಪಾಲ್, ಸಹ ಕುಲಪತಿಗಳಾದ ಡಾ. ಎಚ್. ಡಿ. ಮಹೇಶಪ್ಪ, ಕುಲಸಚಿವರಾದ ಡಾ. ಸುನಿಲ್ ಕುಮಾರ್ ಬಿ. ಎಸ್., ಉಪ ಕುಲಸಚಿವರು (ಮೌಲ್ಯಮಾಪನ), ಡೀನ್‌ಗಳು, ನಿರ್ದೇಶಕರು ಹಾಗೂ ಹಿರಿಯ ಅಧ್ಯಾಪಕರು ಉಪಸ್ಥಿತರಿರಲಿದ್ದಾರೆ.

ಇದಲ್ಲದೆ, ನಿರ್ವಹಣಾ ಮಂಡಳಿ (BOM), ಆಡಳಿತ ಮಂಡಳಿ (BOG), ಶೈಕ್ಷಣಿಕ ಮಂಡಳಿ (AC), ಹಣಕಾಸು ಸಮಿತಿ (FC) ಹಾಗೂ ಸಂಶೋಧನೆ ಮತ್ತು ನಾವೀನ್ಯತೆ ಮಂಡಳಿ (RIC) ಸೇರಿದಂತೆ ವಿಶ್ವವಿದ್ಯಾಲಯದ ಶಾಸನಬದ್ಧ ಮತ್ತು ಆಡಳಿತಾತ್ಮಕ ಮಂಡಳಿಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರ ಉಪಸ್ಥಿತಿಯು ವಿಶ್ವವಿದ್ಯಾಲಯದ ಶೈಕ್ಷಣಿಕ, ಆಡಳಿತಾತ್ಮಕ, ಹಣಕಾಸು ಮತ್ತು ಸಂಶೋಧನಾ ಚಟುವಟಿಕೆಗಳಿಗೆ ದಿಕ್ಕು ನೀಡುವ ಸಮೂಹ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ ಎಂದರು.

ಜಿಎಂ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವು ಸಂಸ್ಥೆಯ ಬಲವಾದ ಅಡಿಪಾಯ, ಶೈಕ್ಷಣಿಕ ಶ್ರೇಷ್ಠತೆ, ನಾವೀನ್ಯತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮೇಲಿನ ಬದ್ಧತೆಯನ್ನು ಸ್ಪಷ್ಟಪಡಿಸುತ್ತದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರದಾನಗೊಳ್ಳುವ ಪದವಿಗಳು ವ್ಯಾಪಾರ ಆಡಳಿತ (ಎಂಬಿಎ), ಕಂಪ್ಯೂಟರ್ ಅಪ್ಲಿಕೇಶನ್ (ಎಂಸಿಎ) ಮತ್ತು ವಾಣಿಜ್ಯ (ಎಂಕಾಂ) ಈ ಕ್ಷೇತ್ರಗಳಲ್ಲಿ ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಸಿದ್ಧರಾಗಿರುವ ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು ಮತ್ತು ಸಾಧನೆಗಳನ್ನು ಗೌರವಿಸುತ್ತವೆ.

ಸಂಸ್ಥೆಯ ದೃಷ್ಟಿಕೋನವನ್ನು ಪುನರುಚ್ಚರಿಸುತ್ತಾ, ವಿಶ್ವವಿದ್ಯಾಲಯದ ನಾಯಕತ್ವವು ಗುಣಮಟ್ಟದ ಶಿಕ್ಷಣ, ಸಂಶೋಧನೆ ಆಧಾರಿತ ಕಲಿಕೆ ಮತ್ತು ಸಮಾಜದ ಬದಲಾಗುತ್ತಿರುವ ಅಗತ್ಯಗಳಿಗೆ ಸ್ಪಂದಿಸುವ ನಾವೀನ್ಯತೆಗಳ ಮೇಲೆ ಜಿಎಂ ವಿಶ್ವವಿದ್ಯಾಲಯವು ವಿಶೇಷ ಗಮನಹರಿಸಿರುವುದನ್ನು ತಿಳಿಸಿದೆ.

ಈ ಉದ್ಘಾಟನಾ ಘಟಿಕೋತ್ಸವವು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳಿಗೆ ಮಾತ್ರವಲ್ಲದೆ, ಸಂಪೂರ್ಣ ಪ್ರದೇಶಕ್ಕೂ ಹೆಮ್ಮೆಯ ಕ್ಷಣವಾಗಿದ್ದು, ಕರ್ನಾಟಕದಲ್ಲಿ ಜಿಎಂ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣದ ಬೆಳೆಯುತ್ತಿರುವ ಕೇಂದ್ರವಾಗಿ ಹೊರಹೊಮ್ಮುತ್ತಿರುವುದನ್ನು ಸೂಚಿಸುತ್ತದೆ ಎಂದರು.

ಮಾಧ್ಯಮ ಗೋಷ್ಠಿಯಲ್ಲಿ ಸಹ ಕುಲಪತಿಗಳಾದ ಡಾ. ಹೆಚ್.ಡಿ. ಮಹೇಶಪ್ಪ, ಕುಲಸಚಿವರಾದ ಡಾ. ಸುನೀಲ್ ಕುಮಾರ್ ಬಿ.ಎಸ್, ಉಪ ಕುಲಸಚಿವರಾದ (ಮೌಲ್ಯಮಾಪನ) ಡಾ. ವೀರಭದ್ರಸ್ವಾಮಿ ಬಿ.ಎನ್, ಮಾರ್ಕೆಟಿಂಗ್ ಮತ್ತು ಪ್ರಮೋಷನ್ ಡೀನ್ ಡಾ. ವೀರಗಂಗಾಧರಸ್ವಾಮಿ ಟಿ.ಎಂ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

Trending