ದಿನದ ಸುದ್ದಿ
ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ
ಸುದ್ದಿದಿನಡೆಸ್ಕ್:18ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರ ಪ್ರಮಾಣ ವಚನ ನಡೆಯಲಿದೆ.
ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹ್ತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ 26 ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ. ಜುಲೈ 3 ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243