Connect with us

ದಿನದ ಸುದ್ದಿ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ : ಮೀನುಗಾರರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ಧಾರವಾಡ : ಕೆಂದ್ರ ಸರ್ಕಾರವು 2020 ರ ಪ್ರಧಾನ ಮಂತ್ರಿ ಮತ್ಸ್ಯ ಸಂಪದ (PMMSY) ಯೋಜನೆಯನ್ನು ಜಾರಿಗೊಳಿಸಿದೆ. ಇದು ದೇಶದ ಮೀನುಗಾರಿಕ ಕ್ಷೇತ್ರದ ಸುಸ್ಥಿರ ಮತ್ತು ಜವಾಬ್ದಾರಿಯುತ ಬೆಳವಣಿಗೆಗಾಗಿ ರೂಪಿಸಿರುವ ಯೋಜನೆಯಾಗಿದ್ದು, ಮೀನುಗಾರರ ಸಾಮಾಜಿಕ ಮತ್ತು ಆರ್ಥಿಕ ಸರ್ವತೋಮುಖ ಅಭಿವೃಧ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಮುಖ್ಯವಾಗಿ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃಧ್ಧಿ, ಕರಾವಳಿ ಮೀನುಗಾರಿಕೆ ಮೂಲಭೂತ ಸೌಲಭ್ಯ ಮತ್ತು ಹಿಡುವಳಿ ನಂತರದ ಕಾರ್ಯಾಚರಣೆಗಳ ಅಭಿವೃಧ್ಧಿ, ಮೀನುಗಾರಿಕಾ ವಲಯದ ದತ್ತಾಂಶ ಮತ್ತು ಭೂಶಾಸ್ತ್ರ ಮಾಹಿತಿಯನ್ನು ಬಲಪಡಿಸುವುದು, ಮೀನುಗಾರಿಕ ವಲಯಕ್ಕೆ ಸುಸ್ಥಿರ ವ್ಯವಸ್ಥೆ ಹಾಗೂ ಮೀನುಗಾರರ ಕಲ್ಯಾಣಕ್ಕಾಗಿ ರಾಷ್ಟ್ರೀಯ ಯೋಜನೆಗಳಾಗಿವೆ.

ಆಸಕ್ತರು ಯೋಜನೆಯ ಸದುಪಯೋಗ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕಾ ಅಧಿಕಾರಿಗಳನ್ನು/ಇಲಾಖೆಯನ್ನು ಸಂಪರ್ಕಿಸಲು ತಿಳಿಸಿದೆ. ಹಾಗೂ ಹೆಚ್ಚಿನ ವಿವರಗಳನ್ನು ವೆಬ್‍ಸೈಟ್ ವಿಳಾಸ http://www.fisherieskarnatakagov.in ನಲ್ಲಿ ಪಡೆಯಬಹುದು ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending