ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್
ಸುದ್ದಿದಿನಡೆಸ್ಕ್:ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಗವಿಯಪ್ಪ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ತಿಳಿಸಿದ್ದಾರೆ.
ಹಿಂದಿನ ಸರ್ಕಾರ ಸಾಕಷ್ಟು ಬಿಲ್ ಬಾಕಿ ಉಳಿಸಿ ಹೋಗಿದ್ದು, ಕೇಂದ್ರ ಸರ್ಕಾರವು ಸರಿಯಾದ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಕೇಂದ್ರದಿಂದ ಅನುದಾನ ತಂದು ರಾಜ್ಯದ ಸಂಪನ್ಮೂಲವನ್ನು ಹೆಚ್ಚಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243