Connect with us

ದಿನದ ಸುದ್ದಿ

ಕೊಡಗು ಪ್ರವಾಹ : ಪರಿಹಾರ ಕೇಂದ್ರದಲ್ಲಿ 1120 ಮಂದಿ ಸಂತ್ರಸ್ತರು

Published

on

ಸುದ್ದಿದಿನ,ಮಡಿಕೇರಿ : ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ.

ಸಂತ್ರಸ್ತರಿಗೆ ವಿತರಿಸಲು ರಾಜ್ಯ, ಜಿಲ್ಲೆಯ ವಿವಿಧೆಡೆಗಳಿಂದ, ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದ, ಸಂಘ ಸಂಸ್ಥೆಗಳಿಂದ ಸ್ವೀಕೃತವಾಗುತ್ತಿರುವ ಪರಿಹಾರ ಸಾಮಾಗ್ರಿಗಳನ್ನು ಜಿಲ್ಲೆಯ ದಾಸ್ತಾನು ಕೇಂದ್ರಗಳಾದ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗೋದಾಮು, ಕುಶಾಲನಗರ ಮತ್ತು ಪೊನ್ನಂಪೇಟೆಯ ಹಳೇ ನ್ಯಾಯಾಲಯ ಕಟ್ಟಡ ಕೇಂದ್ರಗಳಲ್ಲಿ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸೆಪ್ಟೆಂಬರ್ 14 ರಂದು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ನೆರೆ ಸಂತ್ರಸ್ತರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯಾಧಿಕಾರಿಗಳ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಮುಖಾಂತರ ಹಂಚಿಕೆ ಮಾಡಲು 06 ಲಘು ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪ್ರಮುಖ ಅವಶ್ಯವಿರುವ ಸಾಮಾಗ್ರಿಗಳು

ಗೋದಿ ಹಿಟ್ಟು 20 ಕೆ.ಜಿ., 10 ಲೀಟರ್ ಎಣ್ಣೆ, 10 ಕೆ.ಜಿ. ತೊಗರಿ ಬೆಳೆ, 29 ಬಾಕ್ಸ್ ಕುಡಿಯುವ ನೀರಿನ ಬಾಟಲಿ, 15 ಬಾಕ್ಸ್ ಬಿಸ್ಕೇಟ್ ಜಿಲ್ಲಾಡಳಿತದ ವತಿಯಿಂದ ಸಂತ್ರಸ್ತರಿಗೆ ಸೆಪ್ಟೆಂಬರ್ 14 ರಂದು ವಿತರಣೆ ಮಾಡಲಾಗಿದೆ. ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರ ವಿವರ: ಮಡಿಕೇರಿ ತಾಲ್ಲೂಕಿನ 10 ಪರಿಹಾರ ಕೇಂದ್ರಗಳಲ್ಲಿ 333 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 392 ಪುರುಷರು, ಮತ್ತು 435 ಮಹಿಳೆಯರು ಸೇರಿದಂತೆ 827 ಜನ ಸಂತ್ರಸ್ತರಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ 01 ಪರಿಹಾರ ಕೇಂದ್ರದಲ್ಲಿ 119 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 151 ಪುರುಷರು ಮತ್ತು 142 ಮಹಿಳೆಯರು ಸೇರಿದಂತೆ ಒಟ್ಟು 293 ಜನ ಸಂತ್ರಸ್ತರಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿರುವ 11 ಪರಿಹಾರ ಕೇಂದ್ರಗಳಲ್ಲಿ ಒಟ್ಟು 452 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 543 ಪುರುಷರು ಮತ್ತು 577 ಮಹಿಳೆಯರು ಸೇರಿದಂತೆ ಒಟ್ಟು 1120 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

Published

on

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.

ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ...

ದಿನದ ಸುದ್ದಿ2 weeks ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ2 weeks ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ2 weeks ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ2 weeks ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ2 weeks ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ3 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ3 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ3 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ3 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

Trending