ದಿನದ ಸುದ್ದಿ

ಫೆ.20ರ ರಾತ್ರಿ 10.30ಕ್ಕೆ ಭದ್ರಾಜಲಾಶಯದಿಂದ ತುಂಗಭದ್ರಾ ನದಿಗೆ ನೀರು ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : 2020-21 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.20 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾ ನದಿಗೆ ಅವಶ್ಯಕತೆಗೆ ಅನುಗುಣವಾಗಿ ನೀರನ್ನು ಹರಿಸಲಾಗುವುದು.

ಆದುದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲೀ ಇತ್ಯಾದಿ ಚಟುವಟಿಕೆಗಾಗಿ ನದಿ ಪಾತ್ರದಲ್ಲಿ ನದಿಗೆ ಇಳಿಯುವಂತೆ ಎಚ್ಚರಿಕೆ ನೀಡಲಾಗಿದೆ ಮೇಲೆ ತಿಳಿಸಿದ ಅವಧಿಯಲ್ಲಿ ರೈತಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ಸೆಟ್‍ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version