Connect with us

ಲೈಫ್ ಸ್ಟೈಲ್

ಕಿವಿಯಲ್ಲಿ ಫ್ಲವರ್ ; ಟ್ಯಾಟೂ ಜಿವಲ್ಲೆರೀ ಟ್ರೆಂಡಿಂಗ್..!

Published

on

ತ್ತೀಚಿನ ಗ್ಲಾಮರ್ ಯುಗದಲ್ಲಿ,  ಇಂಸ್ಟಂಟ್ ಮತ್ತು ಅಚ್ಚರಿ ಹುಟ್ಟಿಸುವಂತಹ ಚಿತ್ರ ವಿಚಿತ್ರ ಟ್ರೆಂಡ್ ಗಳು ಇಂಸ್ಟಾಗ್ರಾಂ ಟ್ವಿಟ್ಟರ್, ಗಳಲ್ಲಿ ಸುದ್ದಿ ಮಾಡುತ್ತಿದೆ. ಹೆಣ್ಣು ಮಕ್ಕಳ ಆಭರಣ ಪ್ರೇಮ ಇಂದು ನಿನ್ನೆಯದಲ್ಲ. ಆಭರಣಕ್ಕೆ ಪರ್ಯಾಯ ಪದವೇ ಹೆಣ್ಣು ಅನ್ನುವಷ್ಟರ ಮಟ್ಟಿಗೆ ಹೆಂಗಳೆಯರ ಆಭರಣ ಪ್ರೀತಿ ಲೋಕಾರೂಢಿಯಲ್ಲಿ ಕಂಡು ಬರುತ್ತದೆ.

ಆದರೆ ಇತ್ತೀಚೆಗೆ ಕಂಡು ಬರುತ್ತಿರುವ ಫ್ಯಾಷನ್ ಟ್ರೆಂಡ್ ಗಳು ಈ ಲೋಕಾರೂಢಿಯ ನಾನ್ನುಡಿಯನ್ನು ಸುಳ್ಳಾಗಿಸಿದೆ. ಆಧುನಿಕ ಫ್ಯಾಷನ್ ಯುಗದಲ್ಲಿ, ಟ್ಯಾಟೂ ಕ್ರೇಜ್ ಹೆಚ್ಚಿದ್ದು, ದುಬಾರಿ
ಆಭರಣಗಳನ್ನು ಸೈಡಿಗೆ ಸೇರಿಸಿದೆ.

ಟ್ಯಾಟೂ ಜಿವಲ್ಲೆರೀ, ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಹಾಗೂ ಟ್ರೆಂಡ್ ಸೆಟ್ಟರ್ ಆಗಿ ಮಿಂಚುತ್ತಿದೆ. ಚಿನ್ನ ಬೆಳ್ಳಿ ವಜ್ರದ ಆಭರಣಗಳಿಗೆ ಸೆಡ್ಡು ಹೊಡೆದು ನಿಂತಿದೆ ಈ ನೂತನ ಟ್ಯಾಟೂ ಜಿವಲ್ಲೆರೀ ಟ್ರೆಂಡ್ !

ಕಿವಿಯಲ್ಲಿ ಮಿಂಚುವ ಕಿವಿ ಓಲೆಗಳು ಈ ಟ್ರೆಂಡ್ ಗೆ ವಾಶ್ ಔಟ್ ಆಗಿವೆ! ಕಿವಿಯ ಮೇಲೆ ಸುಂದರ ವಾಗಿ ಮೂಡಿ ಬರುತ್ತಿದೆ ಕಲರ್ಫುಲ್ ಫ್ಲವರ್ ಟ್ಯಾಟೂ.. ಬಣ್ಣದ ಹೂಗಳು, ಚಿಟ್ಟೆ, ಎಲೆ-ಬಳ್ಳಿ ಗಳು ಟ್ಯಾಟೂ ಇಯರ್ ಖಫ್ ಮತ್ತು ಇಯರ್ ರಿಂಗ್ ಗಳನ್ನು ರೀಪ್ಲೇಸ್ ಮಾಡಿರುವುದಂತೂ ಸತ್ಯ.

ಅಂತೆಯೇ, ಮೇಲ್ಕುತ್ತಿಗೆ, ಕೈ ತೋಳು, ಕಾಲ್ಗೆಜ್ಜೆ, ಕೈ ಬಳೆ, ಎಂಗೇಜ್ಮೆಂಟ್ ರಿಂಗ್ ಟ್ಯಾಟೂ ಯುವಪೀಳಿಗೆ ಯಲ್ಲಿ ಭಾರೀ ಕ್ರೇಜ್ ಹುಟ್ಟುಹಾಕಿದೆ.

ಚಿತ್ರಶ್ರೀ ಹರ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025'

ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
 

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

 

ವಸ್ತು ಪ್ರದರ್ಶನ

 

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

 

ದೇಸೀ ಆಟಗಳು

 

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Janapada Utsava Channagiri Govt collage (24)
Continue Reading

ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿ ಜೋಳ ಖರೀದಿ

ಸುದ್ದಿದಿನ,ದಾವಣಗೆರೆ:ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿ ಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಜಿಲ್ಲಾ...

ದಿನದ ಸುದ್ದಿ1 day ago

ತುಂಗಭದ್ರಾ ಬೋರ್ಡ್ ಅಧಿಕಾರಿಗಳ ಕಳ್ಳಾಟ : ಕಬ್ಬಿಣ ಕಳ್ಳತನ ಆರೋಪದಲ್ಲಿ ಕಣ್ಣಮುಚ್ಚಾಲೆ ಆಟ ; ಶಾಸಕರ ಹೆಸರು ಪ್ರಸ್ತಾಪ

ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಲಕ್ಷಾಂತರ ರೂಪಾಯಿ ಬೆಳೆ ಬಾಳುವ ಬ್ರಿಡ್ಜ್ ನ ಕಬ್ಬಿಣ ಕಳವು ಠಾಣೆಗೆ ದೂರು ನೀಡಲು ಬಂದ ತುಂಗಭದ್ರಾ ಬೋರ್ಡ್ ಅಧಿಕಾರಿಗಳು, ಪೊಲೀಸರ...

ದಿನದ ಸುದ್ದಿ1 day ago

25 ವರ್ಷಗಳ ನಂತರ ಸಾಕಾರಗೊಂಡ ಡಾ. ಬಿ.ಆರ್.ಅಂಬೇಡ್ಕರ್ ಭವನ ; ಅನುದಾನದ ಕೊರತೆ ಇಲ್ಲ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಅನೇಕ ಕಡೆ ಡಾ; ಬಿ.ಆರ್.ಅಂಬೇಡ್ಕರ್ ಭವನಗಳಿದ್ದರೂ ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು 25 ವರ್ಷಗಳ ಹಿಂದೆ ಪ್ರಯತ್ನಿಸಿದರೂ ಸಾಕಾರಗೊಂಡಿರಲಿಲ್ಲ. ಇದು ಡಾ;ಬಿ.ಆರ್.ಅಂಬೇಡ್ಕರ್ ಅವರ 134...

ಅಂಕಣ3 days ago

ಕವಿತೆ | ಇಷ್ಟಂತೂ ಹೇಳಬಲ್ಲೆ..!

ರಂಗಮ್ಮ ಹೊದೇಕಲ್, ತುಮಕೂರು ನಾವು ಗುಡಿಸಲಿನಲ್ಲಿ ಹುಟ್ಟಿ ಅವ್ವನೆದೆಯ ಹಾಲು ಕುಡಿದು ಗೋಣಿತಾಟಿನ ಮೇಲೆ ಮಲಗಿ ನಕ್ಷತ್ರ ಎಣಿಸಿದವರು! ಚೀಕಲು ರಾಗಿಯ ಅಂಬಲಿ ಕುಡಿದು ತಂಗಳು ಹಿಟ್ಟಿಗೆ...

ದಿನದ ಸುದ್ದಿ3 days ago

ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ನೈತಿಕತೆ ಇಲ್ಲ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ....

ದಿನದ ಸುದ್ದಿ3 days ago

ಮುಂದಿನ 5 ದಿನ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನಡೆಸ್ಕ್:ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಇಂದು...

ದಿನದ ಸುದ್ದಿ4 days ago

ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ

ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು. 2024-25ನೇ ಸಾಲಿನ ರಾಷ್ಟ್ರೀಯ...

ದಿನದ ಸುದ್ದಿ4 days ago

ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್

ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.‌ಮೋನಿಕಾ ರಂಜನ್ ತಿಳಿಸಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್...

ದಿನದ ಸುದ್ದಿ4 days ago

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚಿಸಿದ ಅಬಕಾರಿ ಸುಂಕವನ್ನು ರದ್ದುಗೊಳಿಸಿ : ಯುವ ಕಾಂಗ್ರೆಸ್ ಅಗ್ರಹ

ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು,...

ದಿನದ ಸುದ್ದಿ4 days ago

ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್‍ ಸಮುದಾಯ ಭವನ ಶಂಕುಸ್ಥಾಪನೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ...

Trending