Connect with us

ದಿನದ ಸುದ್ದಿ

ದಾವಣಗೆರೆ ಗಾಜಿನ ಮನೆ ಪುಷ್ಪ ಪ್ರದರ್ಶನದ ಫೋಟೋ ಆಲ್ಬಂ : ಮಿಸ್ ಮಾಡ್ದೆ ನೋಡಿ..!

Published

on

ಸುದ್ದಿದಿನ,ದಾವಣಗೆರೆ : ತೋಟಗಾರಿಕೆ ಬಗ್ಗೆ ಸಾರ್ವಜನಿಕರಲ್ಲಿ ಅಭಿರುಚಿ ಹೆಚ್ಚಿಸಲು ಹಾಗೂ ಮಕ್ಕಳಲ್ಲಿ ಗಿಡಗಳ ಬಗ್ಗೆ ಕುತೂಹಲ ಹೆಚ್ಚಿಸಲು ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ಜ.23 ರಿಂದ 26 ರವರೆಗೆ ನಗರದ ಗಾಜಿನಮನೆಯ ಆವರಣದಲ್ಲಿ ನಾಲ್ಕು ದಿನಗಳ ಕಾಲ ಪುಷ್ಪ ಪ್ರದರ್ಶನವನ್ನು ಆಯೋಜಿಸಿತ್ತು.

ಮನೆಗಳಲ್ಲಿ ವಿವಿಧ ಅಲಂಕಾರಿಕ ಗಿಡಗಳು ಹಾಗೂ ಹೂ ಗಿಡಗಳನ್ನು ಬೆಳೆಸಲು ಪ್ರೋತ್ಸಾಹಿಸುವ ಸಲುವಾಗಿ ಮತ್ತು ಮಕ್ಕಳಲ್ಲಿ ತೋಟಗಾರಿಕೆ ಬಗ್ಗೆ ಜ್ಞಾನ ಹೆಚ್ಚಿಸುವ ಉದ್ದೇಶದಿಂದ ಹಾಗೂ ಆಹ್ಲಾದಕರ ವಾತಾವರಣ ನಿರ್ಮಿಸುವುದಕ್ಕಾಗಿ ನಾಲ್ಕು ದಿನಗಳ ಪುಷ್ಪ ಪ್ರದರ್ಶನವನ್ನು ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು.

ಈ ಬಾರಿ ಪುಷ್ಪ ಪ್ರದರ್ಶನದ ಮುಖ್ಯ ಆಕರ್ಷಣೆ 26 ಅಡಿ ಎತ್ತರ 17 ಅಡಿ ಅಗಲವುಳ್ಳ ಗೇಟ್ ವೇ ಆಫ್ ಇಂಡಿಯಾದ ಪ್ರತಿರೂಪ. ಇದನ್ನು 2,10,000 ಬಿಳಿ, ಕೆಂಪು ಮತ್ತು ಹಳದಿ ಬಣ್ಣದ ಸೇವಂತಿಗೆ ಹೂ ಹಾಗೂ 36,000 ಕೆಂಪು ಗುಲಾಬಿ ಹಾಗೂ ಎಲೆಗಳಿಂದ ನಿರ್ಮಿಸಲಾಗುತ್ತಿದೆ. 45,000 ಹೂಗಳಿಂದ 10 ಅಡಿ ಎತ್ತರ 7 ಅಡಿ ಅಗಲದ 4 ಫೋಟೋ ಫ್ರೇಮ್‍ಗಳನ್ನು ಹೂವಿನ ಕಲಾಕೃತಿಯಿಂದ ಅಲಂಕರಿಸಿ ಪ್ರದರ್ಶಿಸಲಾಯಿತು.

ಪೋಟೋ ಆಲ್ಬಂ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Published

on

ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.

ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.

ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.

ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending