Connect with us

ದಿನದ ಸುದ್ದಿ

ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ ವರ್ಗಾವಣಾ ಪತ್ರ(ಟಿ.ಸಿ), ಆಧಾರಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಸಲ್ಲಿಸಬೇಕಾಗುತ್ತದೆ.

ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು, ಲಘು ವಾಹನ ಚಾಲನ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು. ಜನನ ಪ್ರಮಾಣಪತ್ರ, ಆಧಾರ್‍ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ನೀಡಬೇಕಾಗುತ್ತದೆ.

ಆಸಕ್ತ ಅಭ್ಯರ್ಥಿಗಳು www.karnataka.gov.inವೆಬ್ ಸೈಟ್ ಮೂಲಕ ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸುವಂತೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಚಾಲನಾ ತರಬೇತಿಯನ್ನು ಬೆ.ಮ.ಸಾ.ಸಂಸ್ಥೆ ಕೇಂದ್ರ ವಡ್ಡರಹಳ್ಳಿ, ದಾಸನಪುರ ಹೋಬಳಿ ಬೆಂಗಳೂರು ಉತ್ತರದಲ್ಲಿ ನೀಡಲಾಗುವುದು. ಅರ್ಹ ಅಭ್ಯರ್ಥಿಗಳಿಗೆ 30 ದಿನಗಳ ತರಬೇತಿಯಲ್ಲಿ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-276776 ನ್ನು ಸಂಪರ್ಕಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending