ದಿನದ ಸುದ್ದಿ
ದ್ವಿತೀಯ ಪಿ.ಯು.ಸಿ ಪರೀಕ್ಷಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಸುದ್ದಿದಿನ,ಧಾರವಾಡ : ಇದೇ ಏ.22. ರಿಂದ ಮೇ 18 ರ ವರೆಗೆ ಜರುಗಲಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಸಂಸ್ಥೆಯ ಎಲ್ಲ ಚಾಲಕ, ನಿರ್ವಾಹಕರುಗಳಿಗೆ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ತಿಳುವಳಿಕೆ ನೀಡಲಾಗಿದೆ. ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243