ದಿನದ ಸುದ್ದಿ

ದಾವಣಗೆರೆ | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಟಿ, ಐಐಐಟಿ, ಎನ್‍ಐಟಿ, ಐಐಎಂ, ಐಐಎಸ್‍ಈಆರ್, ಎಐಐಎಂಎಸ್, ಎನ್‍ಎಲ್‍ಯು, ಐಎಲ್‍ಯು, ಐಎನ್‍ಐ, ಮತ್ತು ಐಯುಎಸ್‍ಎಲ್‍ಎ ಮುಂತಾದ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸನ ಪೂರ್ಣಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿ ಪಡೆದು, ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022, 250066 ಸಂಪರ್ಕಿಸಬೇಕೆಂದು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version