ದಿನದ ಸುದ್ದಿ

ಕುರಿಗಾಹಿಗಳಿಗೆ ವಿಮಾ ಸೌಲಭ್ಯ ಒದಗಿಸಲು ಕುರಿಗಾರರಿಂದ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನಲ್ಲಿ ಕುರಿ/ಮೇಕೆ ಸಾಕಾಣಿಕೆದಾರರು/ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದ್ದಲ್ಲಿ ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕುರಿಗಾಹಿಗಳಿಗೆ ರೂ.5,00,000 (ರೂ.ಐದು ಲಕ್ಷ ಮಾತ್ರ)ಗಳಿಗೆ ವಿಮಾ ಸೌಲಭ್ಯ ಒದಗಿಸಲು ಕುರಿಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶುಪಾಲನೆ ಇಲಾಖೆ ಇವರಿಂದ ಪಡೆದು ಜೂನ್ 10 ರ ಒಳಗೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶುಪಾಲನೆ ಇಲಾಖೆ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ದಾವಣಗೆರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version