ದಿನದ ಸುದ್ದಿ
ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಪಾಸಾದವರಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಹರಿಹರ ತಾಲ್ಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್.ಸಿ.ಪಿ-ಟಿ.ಎಸ್.ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಗೆ 2 ತಿಂಗಳು ಅವಧಿಯ ತರಬೇತಿಗಳನ್ನು ಉಚಿತವಾಗಿ ನೀಡಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು.
ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ. ಆಪರೇಟರ್ ಟರ್ನಿಂಗ್, ಸಿ.ಎನ್.ಸಿ. ಪ್ರೋಗ್ರಾಮರ್ ಹಾಗೂ ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್‍ಗ್ರೈಂಡಿಂಗ್ ಮಷಿನ್ ಆಪರೇಟರ್ ಕೋರ್ಸ್‍ಗಳನ್ನು ಮತ್ತು ಡಿಪ್ಲೋಮಾ ಅಥವಾ ಬಿ.ಇ ಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಡಿಸೈನರ್-ಮೆಕ್ಯಾನಿಕಲ್, ಪ್ರೊಡಕ್ಷನ್ ಇಂಜಿನಿಯರ್ ತರಬೇತಿಗಳನ್ನುನೀಡಲಾಗುವುದು.
ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾ.20 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ., 22 ಸಿ&ಡಿ, ಕೆಐಎಡಿಬಿ, ಇಂಡಸ್ಟ್ರೀಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ. ಡಿಪೋ ಹತ್ತಿರ, ಹರಿಹರ ಹಾಗೂ ದೂರವಾಣಿ ಸಂಖ್ಯೆ 08192-24937, 9916908111, 8884488202, 8711913947ಕ್ಕೆ ಸಂಪರ್ಕಿಸಿ ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243