ದಿನದ ಸುದ್ದಿ

ಹೊಲದಲ್ಲಿ ಮರ ನೆಡೋದು ಕಡ್ಡಾಯ; ಹೊಸ ಕಾನೂನು ಜಾರಿಗೆ ಅರಣ್ಯ ಇಲಾಖೆ ಚಿಂತನೆ

Published

on

ಸುದ್ದಿದಿನ ಬೆಂಗಳೂರು: ರೈತರು ಒಂದು ಎಕರೆ ಜಮೀನಿನಲ್ಲಿ ಕ ಜನನ ಕನಿಷ್ಟ 20 ಸಸಿ ನೆಟ್ಟು ಅವುಗಳನ್ನು ಪೋಷಣೆ ಮಾಡುವುದು ಕಡ್ಡಾಯ ಕಾನೂನು ಜಾರಿಗೆ ತರಲು ರಾಜ್ಯ ಅರಣ್ಯ ಇಲಾಖೆ ಚಿಂತನೆ ನಡೆಸಿದ್ದು, ಹಸಿರೀಕರಣ ಹಾಗೂ ಪರಿಸರ ಸಂರಕ್ಷಣೆಗೂ ಅನುಕೂಲವಾಗುವ ಉದ್ದೇಶದಿಂದ ಯೋಜನೆ ಜಾರಿಗೊಳಿಸುತ್ತಿದೆ ಎಂದು ಅರಣ್ಯ ಸಚಿವ ಆರ್.ಶಂಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಸಿರು ವಾತಾವರಣ ಹೆಚ್ಚಿಸುವ ಉದ್ದೇಶದಿಂದ ಕೃಷಿ ಜಮೀನಿನಲ್ಲಿ ಮರ ಬೆಳೆಸುವ ಕೃಷಿ ಪ್ರೋತ್ಸಾಹ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ಹಾಗಾಗಿ ಕೃಷಿ ಭೂಮಿಯಲ್ಲಿ ಸಸಿ ಬೆಳೆಸಲು ಪ್ರೋತ್ಸಾಹಿಸಲಾಗುತ್ತಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಪ್ಲಾಸ್ಟಿಕ್ ನಿಷೇಧಿಸಿರುವಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ನಿಷೇಧ ಮಾಡಲಾಗುವುದು. ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳಲ್ಲಿ ನೈರ್ಮಲ್ಯ ಮತ್ತು ಸ್ವಚ್ಛತೆ ಕಾಪಾಡಲು ಪ್ಲಾಸ್ಟಿಕ್ ನಿಷೇಧಿಸಲು ಕಾನೂನನ್ನು ಮತ್ತಷ್ಟು ಕಠಿಣ ಮಾಡಲಾಗುವುದು.

Leave a Reply

Your email address will not be published. Required fields are marked *

Trending

Exit mobile version