ದಿನದ ಸುದ್ದಿ
ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದು ಏಕೆ ಗೊತ್ತಾ ?
ಸುದ್ದಿದಿನ, ಬೆಂಗಳೂರು|ವಿಧಾನಸಭೆ ಚುನಾವಣೆಯಿಂದ ಧಣಿವಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜ್ಯ ಪ್ರವಾಸ ಮಾಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಣಿವಾಗಿದ್ದರು. ಈಗ ವಿಶ್ರಾಂತಿ ಪಡೆಯಲು ಬೆಂಗಳೂರಿನ ಸಮೀಪದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ. ಪ್ರತಿ ವರ್ಷವೂ ಜಿಂದಾಲ್ ಆಸ್ಪತ್ರೆಗೆ ಬಿ.ಎಸ್.ಯಡಿಯೂರಪ್ಪ ದಾಖಲಾಗುತ್ತಿದ್ದಾತರ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಧರ್ಮಸ್ಥಳದ ಪ್ರಕೃತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದದ್ದನ್ನು ಇಲ್ಲಿ ಸ್ಮರಿಸಬಹುದು.