ರಾಜಕೀಯ

ಸಂವಿಧಾನೇತರ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಇದ್ದಾರೆ, ಯಡಿಯೂರಪ್ಪ ಹೆಸರಿಗಷ್ಟೇ ಸಿಎಂ : ಸಿದ್ದರಾಮಯ್ಯ ಆಕ್ರೋಶ

Published

on

ಸುದ್ದಿದಿನ,ದಾವಣಗೆರೆ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂವಿಧಾನೇತರ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಇದ್ದಾರೆ ಅಂತ ಜನ ಹೇಳ್ತಿದ್ದಾರೆ. ಯಡಿಯೂರಪ್ಪ ಹೆಸರಿಗಷ್ಟೇ ಸಿಎಂ, ವಿಜಯೇಂದ್ರ ಸಹಿ ಮಾಡೋದಂತೆ. ಬಹಳ ಜನ ಅಸಮಾಧಾನಿತ ಬಿಜೆಪಿ ಶಾಸಕರು ನನ್ನನ್ನು ಭೇಟಿಯಾಗಿ, ಸಹಜವಾಗಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ಇರೋದು ನಿಜ. ಆ ಭಿನ್ನಮತ ಮುಂದುವರಿಯಲಿದೆ. ಬಿಜೆಪಿಯ ಆಂತರಿಕ ಕಿತ್ತಾಟದಲ್ಲಿ ನಾವು ಕೈಹಾಕುವುದಿಲ್ಲ. ಸರಕಾರ ಅದರಷ್ಟಕ್ಕೆ ಪತನಗೊಂಡರೆ ನಾವು ಜವಾಬ್ದಾರರಲ್ಲ ಎಂದು ಹೇಳಿದರು.

ಕೊಪ್ಪಳದಲ್ಲಿ ಪ್ರಗತಿಪರರ ಮೇಲೆ ಕೇಸ್ ಹಾಕಿರುವುದನ್ನು ಖಂಡಿಸುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರುವ ಯಾವ ಸರ್ಕಾರವೂ ಈ ರೀತಿ ಮಾಡುವುದಿಲ್ಲ. ಜನರ ಧ್ವನಿಯನ್ನು ಹತ್ತಿಕ್ಕುವುದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಸರ್ಕಾರ ತನ್ನ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version