ದಿನದ ಸುದ್ದಿ
ಮಾಜಿ ರಾಜ್ಯಪಾಲ ಆತ್ಮಹತ್ಯೆಗೆ ಶರಣು..!
ಸುದ್ದಿದಿನ ಡೆಸ್ಕ್ : ಮಣಿಪುರ ಮತ್ತು ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ಹಾಗೂ ಸಿಬಿಐ ಮಾಜಿ ನಿರ್ದೇಶಕರಾದ ಅಶ್ವನಿ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಬಿಪಿ ನ್ಯೂಸ್ ವರದಿಮಾಡಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಶಿಮ್ಲಾದಲ್ಲಿರುವ ಅವರ ನಿವಾಸದಲ್ಲಿ ದೇಹ ಪತ್ತೆಯಾಗಿದೆ ಎಂದು ಅಲ್ಲಿನ ಎಸ್‌ಪಿ ಮೋಹಿತ್ ಚಾವ್ಲಾ ಅವರು ಮಾಹಿತಿ ನೀಡಿದ್ದಾರೆ. ಕೆಲವು ಸಮಯದಿಂದ ಖಿನ್ನತೆಗೊಳಗಾಗಿದ್ದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಸುದ್ದಿದಿನ.ಕಾಂ | ವಾಟ್ಸಾಪ್ | 9980346253