ದಿನದ ಸುದ್ದಿ
ಭಾರತದ ಪರ ಘೋಷಣೆ ಕೂಗಿದ್ದಕ್ಕೆ ಚಪ್ಪಲಿ ತೋರಿಸಿದರು !: ಏನಿದು ಘಟನೆ ಓದಿ
ಸುದ್ದಿದಿನ ಡೆಸ್ಕ್: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಬುಧವಾರ ದೇಶ ವಿರೋಧಿ ಘಟನೆ ನಡೆದಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ಶ್ರೀನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ‘ಭೋಲೋ ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದರು. ಆಗ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೆಲವು ಸಂಘಟನೆಗಳು ಬೀದಿಗಳಿದು ಚಪ್ಪಲಿ ತೋರಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಫಾರೂಕ್ ಅವರನ್ನು ಜಮ್ಮು ಕಾಶ್ಮೀರದಿಂದ ಹೊರಹಾಕಬೇಕು ಎಂದು ಒತ್ತಾಯಿಸುತ್ತಿವೆ. ಈ ಘಟನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.