ರಾಜಕೀಯ

ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ, ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

Published

on

ಸುದ್ದಿದಿನ ಡೆಸ್ಕ್: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಮಾಜಿ ಸಚಿವ ತಿಪ್ಪೇಸ್ವಾಮಿ ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ಪರಥೀವ ಶರೀರವನ್ನು ಚಳ್ಳಕೆರೆಗೆ ತರಲಾಗುವುದೆಂದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜಕೀಯ ಸಾಧನೆ: ಕಾಟಪನಹಟ್ಟಿ ಕಾರ್ಖನೆ ತಿಪ್ಪಯ್ಯ, ವಿಮಲಮ್ಮ ದಂಪತಿಗಳ ಪುತ್ರನಾಗಿ ಜನಿಸಿದ ತಿಪ್ಪೇಸ್ವಾಮಿ ಅವರು ಶಾಸಕರಾಗಿ ಮತ್ತು ಸಚಿವರಾಗಿ
ಹೆಚ್.ಡಿ.ದೇವೇಗೌಡರ ಸಂಪುಟದಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವರಾಗಿ ಕೆಲಸ ಮಾಡಿದ್ದರು. ರಾಜಕೀಯ ಮುತ್ಸದಿತನ ಕಾರಣಕ್ಕೆ ಚಿತ್ರದುರ್ಗ ಜಿಲ್ಲೆಯಲ್ಲಿ ಅವರಿಗೆ ಉತ್ತಮ ಹೆಸರಿದೆ.

Leave a Reply

Your email address will not be published. Required fields are marked *

Trending

Exit mobile version