ದಿನದ ಸುದ್ದಿ
ಭಾರತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪಾಕ್ ನ ಮಾಜಿ ಪ್ರಧಾನಿ
ಸುದ್ದಿದಿನ ಡೆಸ್ಕ್ : ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಶ್ಲಾಘಿಸಿದ್ದಾರೆ. ನವದೆಹಲಿಯ ನಿರ್ಧಾರ ಜನರ ಹಿತರಕ್ಷಣೆಗಾಗಿದೆ ಎಂದು ಹೇಳಿದ್ದಾರೆ.
ಲಾಹೋರ್ನಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿದ ಇಮ್ರಾನ್ ಖಾನ್ ಅಮೇರಿಕದ ರಾಜತಾಂತ್ರಿಕ ಮೈತ್ರಿ ಹೊಂದಿರುವ ಭಾರತ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿದೆ. ಭಾರತ ಸರ್ಕಾರದ ಈ ವಿದೇಶಾಂಗ ನೀತಿಯಲ್ಲಿ ತನ್ನ ಪ್ರಜೆಗಳ ಹಿತವಡಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಮಾರ್ಚನಲ್ಲಿಯೂ ಇಮ್ರಾನ್ ಖಾನ್ ಭಾರತದ ವಿದೇಶಾಂಗ ನೀತಿ ಸ್ವತಂತ್ರವೂ ಮತ್ತು ಭಾರತೀಯರ ಹಿತಕ್ಕಾಗಿಯೂ ಇದೆ ಎಂದು ಇಮ್ರಾನ್ ಖಾನ್ ಶ್ಲಾಘಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243