ದಿನದ ಸುದ್ದಿ
ಸಾಲಬಾದೆ : ಮೂರು ತಿಂಗಳ ಗರ್ಭಿಣಿ ಹೆಂಡತಿ ಬಿಟ್ಟು ಆತ್ಮಹತ್ಯೆಗೆ ಶರಣಾದ ಯುವ ರೈತ..!
ಸುದ್ದಿದಿನ,ಮಂಡ್ಯ : ಮನೆ ಮುಂದೆ ನಿಲ್ಲಿಸಿದ್ದ ತನ್ನ ಆಟೋದಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ, ಸುಂಕಾತೊಣ್ಣೂರು ಗ್ರಾಮದಲ್ಲಿ ನಡೆದಿದೆ.
ಮೂರು ತಿಂಗಳ ಗರ್ಭಿಣಿ ಹೆಂಡತಿ ಬಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಯುವ ರೈತ ಚಂದ್ರು (35) ಬೇರೆಯವರಿಂದ ಜಮೀನು ಗುತ್ತಿಗೆ ಪಡೆದುಕೊಂಡು ಟಮೊಟೊ ಬೆಳೆ ಬೆಳೆಯುತ್ತಿದ್ದರು. ಬೆಳೆ ನಷ್ಟವಾದ ಹಿನ್ನಲೆ ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲೇ ನೇಣಿಗೆ ಶರಣಾಗಿದ್ದಾರೆ. ಈ ಹಿನ್ನೆಲೆ ಮುಗಿಲು ಮುಟ್ಟಿದೆ ಕುಟುಂಬಸ್ಥರ ಆಕ್ರಂಧನ. ಮೇಲುಕೋಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401