Connect with us

ದಿನದ ಸುದ್ದಿ

ಕೋವಿಡ್ ನಿಯಂತ್ರಿಸಲು ದಾವಣಗೆರೆ ಜಿಲ್ಲೆಯಲ್ಲಿ ವಾರದಲ್ಲಿ 04 ದಿನ ಸಂಪೂರ್ಣ ಲಾಕ್‍ಡೌನ್ : ಸಚಿವ ಭೈರತಿ ಬಸವರಾಜ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಕೋವಿಡ್ ಸೋಂಕಿನ 2ನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಜಿಲ್ಲೆಯಲ್ಲಿ ವಾರದ 04 ದಿನ ಸಂಪೂರ್ಣ ಲಾಕ್‍ಡೌನ್ ಮತ್ತು 03 ದಿನ ಸಾಮಾನ್ಯ ಲಾಕ್‍ಡೌನ್ ವಿಧಿಸಲು ಕ್ರಮ ಜರುಗಿಸುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ -19 ನಿಯಂತ್ರಣದ ಕುರಿತು ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ, ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಸರ್ಕಾರದ ಕ್ರಮಗಳಿಗೆ ಜನರು ಸಹಕಾರ ನೀಡುತ್ತಿಲ್ಲ. ಹೀಗಾದಲ್ಲಿ ಕೊರೋನಾ ನಿಯಂತ್ರಿಸಲು ಹೇಗೆ ಸಾಧ್ಯ, ಪರಿಸ್ಥಿತಿ ಕೈಮೀರುವ ಮೊದಲೇ ನಾವು ಎಚ್ಚರಿಕೆ ವಹಿಸಿ, ಕೋವಿಡ್ ಹರಡುವಿಕೆಯ ಸರಪಳಿಯನ್ನು ತುಂಡರಿಸುವ ಸಲುವಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲೇಬೇಕಿದೆ.

ಹೀಗಾಗಿ ಜಿಲ್ಲೆಯಲ್ಲಿ ವಾರದಲ್ಲಿ 04 ದಿನ ಸಂಪೂರ್ಣ ಲಾಕ್‍ಡೌನ್ ಹಾಗೂ 03 ದಿನ ಈಗಿರುವಂತೆ ಸಾಮಾನ್ಯ ಲಾಕ್‍ಡೌನ್ ಜಾರಿಗೊಳಿಸಬೇಕು. ಈಗಾಗಲೆ ಶಿವಮೊಗ್ಗ ಜಿಲ್ಲೆಯಲ್ಲಿ ಈ ರೀತಿ ಕ್ರಮ ಕೈಗೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿಯೂ ಇದೇ ಮಾದರಿಯನ್ನು ಅನುಸರಿಸುವುದು ಸೂಕ್ತ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಂ.ಪಿ. ರೇಣುಕಾಚಾರ್ಯ ಅವರು ಸಚಿವರಿಗೆ ಮನವಿ ಮಾಡಿದರು.

ಇದನ್ನೂ ಓದಿ | ದಾವಣಗೆರೆ | ನಗರದಿಂದ ಗ್ರಾಮಗಳಿಗೆ ಸೋಂಕು ರವಾನೆ 

ಇದಕ್ಕೆ ಸ್ಪಂದಿಸಿದ ಸಚಿವರು, ಜಿಲ್ಲೆಯಲ್ಲಿ ಕೂಡಲೆ ವಾರದ 04 ದಿನ ಸಂಪೂರ್ಣ ಲಾಕ್‍ಡೌನ್ ಮತ್ತು 03 ದಿನ ಸಾಮಾನ್ಯ ಲಾಕ್‍ಡೌನ್ ವಿಧಿಸಲು ಅಗತ್ಯ ಕ್ರಮ ಕೈಗೊಂಡು, ಯಾವ ವಾರಗಳಂದು ಯಾವ ರೀತಿಯ ಲಾಕ್‍ಡೌನ್ ಇರಬೇಕು ಎಂಬುದನ್ನು ಜಿಲ್ಲಾಧಿಕಾರಿಗಳು ನಿರ್ಧರಿಸಿ, ಆದೇಶ ಹೊರಡಿಸಬೇಕು. ಸಂಪೂರ್ಣ ಲಾಕ್‍ಡೌನ್ ಅವಧಿಯಲ್ಲಿ ಒಂದು ನರಪಿಳ್ಳೆಯೂ ರಸ್ತೆಗಿಳಿಯದಂತೆ ಕಠಿಣ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು ಎಂದು ಸಚಿವರು ಸಭೆಯಲ್ಲಿಯೇ ಆದೇಶ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪ್ರತಿಕ್ರಿಯಿಸಿ, ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡದೇ ಹೋದರೆ ಕೋವಿಡ್ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸರು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ, ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ಕ್ರಮಗಳಿಗೆ ಇಲ್ಲಸಲ್ಲದ ಅಪಪ್ರಚಾರ ನೀಡುತ್ತಾರೆ.

ಮಾಧ್ಯಮಗಳೂ ಕೂಡ ಇದನ್ನು ಟೀಕಿಸುವುದು ಸರಿಯಲ್ಲ. ಜನರ ಪ್ರಾಣ ರಕ್ಷಣೆ ಮುಖ್ಯವಾಗಿದ್ದು ಇದಕ್ಕೆ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending