ದಿನದ ಸುದ್ದಿ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ : ಹವಾಮಾನ ಇಲಾಖೆ
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಇದೇ 7ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243