ದಿನದ ಸುದ್ದಿ

ಕಳೆದ 24 ಗಂಟೆಗಳಲ್ಲಿ ನಾಲ್ಕು ಸಾವಿರದ 400 ಕೋವಿಡ್ ಸೋಂಕಿತರು ಗುಣಮುಖ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ದೇಶಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಇದುವರೆಗೆ, 195 ಕೋಟಿ 7 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್‌ಗಳನ್ನು ನೀಡಲಾಗಿದ್ದು, ನಿನ್ನೆ ಒಂದೇ ದಿನ, 14 ಲಕ್ಷ 4 ಸಾವಿರಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಚೇತರಿಕೆ ಪ್ರಮಾಣ ಸದ್ಯ ಶೇಕಡ 98.68ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ನಾಲ್ಕು ಸಾವಿರದ 400 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ ನಾಲ್ಕು ಕೋಟಿ 26ಲಕ್ಷ 52 ಸಾವಿರದ 743 ಮಂದಿ ಚೇತರಿಸಿಕೊಂಡಿದ್ದಾರೆ.

ಈ ನಡುವೆ, ಕಳೆದ 24 ಗಂಟೆಗಳಲ್ಲಿ ಸುಮಾರು 8ಸಾವಿರದ 500 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಪ್ರಸ್ತುತ 44 ಸಾವಿರದ 513 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳ ಶೇಕಡ 0.10ಯಷ್ಟಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version