Connect with us

ದಿನದ ಸುದ್ದಿ

ಗಾಣಗಾಪೂರ ದತ್ತಾತ್ರೇಯ ದೇವರಿಗೆ ಅರ್ಚಕರಿಂದ ವಂಚನೆ: ಹೇಗೆ ಗೊತ್ತಾ..?

Published

on

ಸುದ್ದಿದಿನ,ಕಲಬುರಗಿ: ದೇವರು ಅಂದ್ರೆ ಭಯಭಕ್ತಿ ಹೆಚ್ಚು, ಆದ್ರೆ ಇಲ್ಲಿ ಕೇಲ ವಂಚಕರು ಭಯಭಕ್ತಿ ಎಲ್ಲವನ್ನು ಬಿಟ್ಟು ದೇವರ ಹೆಸರಿನಲ್ಲಿಯೇ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದೇವರ ಹೆಸರಿನಲ್ಲಿ ಭಕ್ತರಿಗೆ ವಂಚಿಸಿರೋದು ಸ್ವತಾ ಅರ್ಚಕರು ಅನ್ನೋದು ಇಲ್ಲಿ ಗಮನಾರ್ಹ ವಿಷಯ.

ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ಮೂಲೆಮೂಲೆಗಳಲ್ಲಿ ಭಕ್ತರಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಗಾಣಗಾಪುರದ ಕೇಲ ಅರ್ಚಕರು ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ದೇವರ ಜೊತೆಗೆ ಭಕ್ತರಿಗೆ ಪಂಗನಾಮ ಹಾಕಿದ್ದಾರೆ. ದತ್ತಾತ್ರೇಯ ದೇವಸ್ಥಾನಕ್ಕೆ ಕಲಬುರಗಿ ಡಿಸಿ ಯಶವಂತ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಪ್ರಕರಣ ಬಯಲಿಗೆ ಬಂದಿದೆ.

ದೇವಸ್ಥಾನದ ಅಧಿಕೃತ ವೆಬ್‌ಸೈಟ್ www.devalgangapur.com (Shri dattatreya temple.ghanagapur) ಎಂದಿದೆ. ಆದ್ರೆ ಅಧಿಕೃತ ವೆಬ್ ಸೈಟ್ ಹೊರತುಪಡಿಸಿ ಅರ್ಚಕರೇ ಏಳೆಂಟು ನಕಲಿ ವೆಬ್ ಸೈಟ್ ಗಳನ್ನು ಕ್ರಿಯೇಟ್ ಮಾಡಿದ್ದಾರೆ. ದರ್ಶನ, ವಿಶೇಷ ಪೂಜೆ, ಅರ್ಚನೆ ಸೇರಿ ದೂರದ ಊರಿನಲ್ಲಿಯೇ ಕುಳಿತು ಆನ್‌ಲೈನ್ ಬುಕ್ ಮಾಡಿವ ವ್ಯವಸ್ಥೆಯನ್ನು ದುರುಪಯೋಗ ಪಡರಸಿಕೊಂಡಿದ್ದಾರೆ. ದೇವಸ್ಥಾನಕ್ಕೆ ಸಲ್ಲಿಸುವ ಧಾನವನ್ನು ಕೂಡಾ ವಂಚಕರು ತಮ್ಮ ಖಾತೆಗಳಿಗೆ ಹಾಕಿಸಿಕೊಂಡು ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ದೇವಸ್ಥಾನದ ಹುಂಡಿ ಎಣಿಕೆ ವೇಳೆಯೂ ಮೋಸ ಮಾಡಿರುವಂತೆ ಕಂಡುಬಂದಿದೆ.. ಎಣಿಕೆ ವೇಳೆ ಸಿಸಿ ಕ್ಯಾಮಾರಾ ಕಣ್ಣುಗಳನ್ನು ಮುಚ್ಚಿ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

ದೇವಸ್ಥಾನ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರ ಸೂಚನೆ ಮೇರೆಗೆ ದೇವಲಗಾಣಗಾಪುರ ಠಾಣೆಯಲ್ಲಿ ಏಳುಜನ ವಂಚಕರ ಮೇಲೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕೇವಲ ಅರ್ಧ ಗಂಟೆಯಲ್ಲಿ ನಕಲಿ ವೆಬ್ಸೈಟ್ಗಳು ಡಿಲೀಟ್ ಆಗಿವೆ. ಆದ್ರೆ ಸುಮಾರು ಮೂರ್ನಾಲು ವರ್ಷಗಳಿಂದ ವಂಚನೆ ನಡೆದಿದ್ದು, ದೇವಸ್ಥಾನದಿಂದ ಮುಜರಾಯಿ ಇಲಾಖೆಗೆ ಬರಬೇಕಾದ ಕೋಟ್ಯಾಂತರ ರೂಪಾಯಿ ಆದಾಯ ಖದೀಮರು ನುಂಗಿಹಾಕಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವ ಸಾಧ್ಯತೆ ಕೂಡಾ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಹಕ ರಕ್ಷಕ ತಪಾಸಣೆ ವಾಹನಗಳಿಗೆ ಚಾಲನೆ ಹಾಗೂ ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending