ದಿನದ ಸುದ್ದಿ

ಉಚಿತ ಜೆ.ಸಿ.ಬಿ. ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಹಾವೇರಿ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಿಂದ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದೇ ಫೆಬ್ರುವರಿ 10 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಮಾಹಿತಿ, ಸಾಫ್ಟ್ ಸ್ಕಿಲ್ ಮಾಹಿತಿಯನ್ನು ತರಬೇತಿ ಅವಧಿಯಲ್ಲಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.9449782425 ಸಂಪರ್ಕಿಸಲು ಕೋರಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version