ದಿನದ ಸುದ್ದಿ
ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯು ದಿನಾಂಕ 06 ಜುಲೈ 2026 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು.ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.ಗ್ರಾಮೀಣ ಪ್ರದೇಶದ ಬಿಪಿಎಲ್ (BPL) ಕಾರ್ಡ್ ಹೊಂದಿರುವವರಿಗೆ ವಿಶೇಷ ಆದ್ಯತೆ ನೀಡಲಾಗುವುದು. ತರಬೇತಿಗೆ ಅರ್ಜಿ ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಬಹುದು. ಅಥವಾ ಮೊಬೈಲ್ ಸಂಖ್ಯೆಗಳು: 9241482541, 9481506564, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243