ದಿನದ ಸುದ್ದಿ
ದಾವಣಗೆರೆ | ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2019-20ನೇ ಸಾಲಿನ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವಿನ ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೌಶಲ್ಯ ತರಬೇತಿಗಳನ್ನು ಹರಿಹರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತವಾಗಿ ನಡೆಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 18 ರಿಂದ 45 ವಯೋಮಾನದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಎಸ್.ಎಸ್.ಎಲ್.ಸಿ/ ಐ.ಟಿ.ಐ / ಡಿಪ್ಲೋಮ / ಬಿ.ಇ ಪಾಸ್ ಆಗಿರುವ ಅಭ್ಯರ್ಥಿಗಳಿಗೆ 3 ತಿಂಗಳ ಅವಧಿಯ ಸಿಎನ್‍ಸಿ ಟೆಕ್ನಲಾಜಿಸ್ಟ್, ಸಿಎನ್‍ಸಿ ಪ್ರೋಗ್ರಾಮರ್/ ಸಿಎನ್‍ಸಿ ಆಪರೇಟರ್ ವರ್ಟಿಕಲ್ ಮಷಿನಿಂಗ್ ಸೆಂಟರ್/ ಕನ್ವೆನ್ಷನಲ್ ಮಿಲ್ಲಿಂಗ್/ಟರ್ನಿಂಗ್ ಆಪರೇಟರ್ ಉಚಿತ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು.
ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿಗಳನ್ನು ಕಾಲೇಜಿನ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ
ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22 ಸಿ & ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ, ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ, ಹರಿಹರ ದೂರವಾಣಿ: 08192-243937, 9513010166, 8711913947, 8884488202 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243