ದಿನದ ಸುದ್ದಿ

ಕೊರೋನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ : ಸಿಎಂ ಯಡಿಯೂರಪ್ಪ

Published

on

ಸುದ್ದಿದಿನ, ಬೆಂಗಳೂರು: ಕೊರೋನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ಅವಕಾಶ ನೀಡಿದ್ದು, ಇದುವರೆಗೆ 2.6 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ | ಸಿಎಂ ಯಡಿಯೂರಪ್ಪ ವಿಶೇಷ ಪ್ಯಾಕೆಜ್ | ಯಾರಿಗೆ ಎಷ್ಟು ಸಹಾಯಧನ..? ಸಾಲ ಮರುಪಾವತಿಗೆ ಮೂರು ತಿಂಗಳ ಅವಕಾಶ

ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬುಧವಾರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 956 ಕೋಟಿ ಖರ್ಚು ಮಾಡಲಾಗುತ್ತದೆ. ಪ್ರತಿ ಪಂಚಾಯತಿಗೆ ಕೋವಿಡ್ ನಿರ್ವಹಣೆಗೆ 50 ಸಾವಿರ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಲೈನ್ ಮ್ಯಾನ್, ಗ್ಯಾಸ್ ತಲುಪಿಸೋರು, ಶಿಕ್ಷಕರು ಫ್ರಂಟ್ ಲೈನ್ ವರ್ಕರ್ಸ್ ಅಂತ ಸಿಎಂ ಘೋಷಣೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version