ದಿನದ ಸುದ್ದಿ
ನಿತ್ಯ ಭವಿಷ್ಯ | ಒಂದೇ ಒಂದು ಕರೆ ನಿಮ್ಮ ಜೀವನವನ್ನೇ ಬದಲಿಸಬಹುದು : ಕರೆಮಾಡಿ
ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ:9945410150
ಮೇಷ ರಾಶಿ
ಇಂದು ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೈವದ ಮೊರೆ ಹೋಗುವ ಸಾಧ್ಯತೆ ಕಾಣಬಹುದು. ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ಉತ್ತಮ ಅವಕಾಶಗಳನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನೀರಿನ ಪ್ರದೇಶದ ಪ್ರವಾಸದಲ್ಲಿ ಆದಷ್ಟು ಎಚ್ಚರವಿರಲಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯದತ್ತ ಯೋಚನೆ ಮಾಡಿ. ಮಕ್ಕಳಿಂದ ನಿಮ್ಮ ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸುವುದು ನಿಮ್ಮ ಕಾಯಿಲೆಯನ್ನು ಇನ್ನಷ್ಟು ಉಲ್ಬಣಿಸಬಹುದಾದ್ದರಿಂದ ಹಾಗೆ ಮಾಡಬೇಡಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರು ಬೆಂಬಲ ನೀಡಿದರೂ ತುಂಬ ಬೇಡಿಕೆಯಿಡುತ್ತಾರೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಇಂದು ಪ್ರಣಯದ ಯಾವುದೇ ಆಸೆಯಿಲ್ಲ ದೇಶಿ ವ್ಯಾಪಾರಕ್ಕೆ ಸೇರಿರುವ ಜನರು, ಇಂದು ಅವರು ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ಸಂಪೂರ್ಣ ಭರವಸೆ ಇದೆ. ಇದರೊಂದಿಗೆ ಉದ್ಯೋಗಕ್ಕೆ ಸಂಬಂಧಿಸಿದ ಈ ರಾಶಿಚಕ್ರದ ಜನರು, ತನ್ನ ಪ್ರತಿಭೆಯ ಪೂರ್ತಿ ಬಳಕೆಯನ್ನು ಕೆಲಸದ ಸ್ಥಳದಲ್ಲಿ ಮಾಡಬಹುದು. ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ಇಂದು ನೀವು ಆನಂದವನ್ನು ಹುಡುಕುತ್ತ ಯಾವುದೇ ಆಧ್ಯಾತ್ಮಿಕ ಗುರುವನ್ನು ಭೇಟಿ ಮಾಡಲು ಹೋಗಬಹುದು. ನಿಮ್ಮ ಸಂಗಾತಿ ನೀವು ಹೊಂದಿರುವ ಅಷ್ಟೇನೂ ಸಾಮರಸ್ಯವಿರದ ವೈವಾಹಿಕ ಜೀವನದ ಬಗ್ಗೆ ನಿಮ್ಮ ಜೊತೆ ಜಗಳವಾಡಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಮಕ್ಕಳ ವರ್ತನೆ ಬಗ್ಗೆ ಆದಷ್ಟು ಗಮನ ಇಡುವುದು ಸೂಕ್ತ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಉತ್ತಮವಾಗಿ ನಡೆಯಲಿದೆ. ವ್ಯವಹಾರದಲ್ಲಿ ಮೋಸ ಹೋಗಬಹುದಾದ ಸಾಧ್ಯತೆ ಇದೆ ಎಚ್ಚರ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಪತ್ನಿಯೊಡನೆ ವಿನಾಕಾರಣ ವೈಮನಸ್ಸು ಸೃಷ್ಟಿಸುವುದು ಸರಿ ಕಾಣುವುದಿಲ್ಲ. ನಿಮ್ಮ ಕಠೋರ ಮಾತುಗಳಿಂದ ಸಮಸ್ಯೆ ಬರಬಹುದಾಗಿದೆ. ಕಚೇರಿ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಕಾಣಬಹುದು. ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಾಗಿ ಇರತಕ್ಕದ್ದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಕುಶಲಕರ್ಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಳೆಯ ಹೂಡಿಕೆಗಳು ಲಾಭಾಂಶ ತರಲಿದೆ. ಆತ್ಮೀಯರೊಡನೆ ಈ ದಿನ ಸಂತೋಷವಾಗಿ ಕಾಲ ಕಳೆಯುತ್ತೀರಿ. ಮನೆಗೆ ನೆಂಟರಿಷ್ಟರ ಆಗಮನ ಆಗುವುದು. ದುಂದುವೆಚ್ಚವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ22 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

