ದಿನದ ಸುದ್ದಿ
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಗಳ ಅನುಷ್ಟಾನಕ್ಕಾಗಿ ಹಿಂದುಳಿದ ವರ್ಗಗಳ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 03ರಂದು ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ https://suvidha.karnataka.gov.in/
ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ/ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ವೆಬ್‍ಸೈಟ್ https://dbcdc.karnataka.gov.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243