ರಾಜಕೀಯ
ಮೈತ್ರಿ’ ನಾಯಕರ ವಾಕ್ಸಮರ ಇಂದಿನಿಂದ ನಿಲ್ಲುತ್ತೆ : ಜಿ.ಟಿ. ದೇವೇಗೌಡ
ಸುದ್ದಿದಿನ,ಮಂಡ್ಯ : ನನ್ನ ಶ್ರೀಮತಿಯವರ ಅಪೇಕ್ಷೇ ಮೇರೆಗೆ ಈ ದೇವಸ್ಥಾನಕ್ಕೆ ಬಂದಿದ್ದೇನೆ. ಭಾರೀ ಸಂತೋಷ ಆಯ್ತು ಅರ್ಚಕರು 101 ಕಳಸದ ಅಭಿಷೇಕವನ್ನು ಪುರೋಹಿತರು ಬಹಳ ಭಕ್ತಿ ಪೂರ್ವಕವಾಗಿ ಮಾಡಿದ್ದಾರೆ ಎಂದು ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
ನಂತರ ವರದಿಗಾರರೊಂದಿಗೆ ಮಾತನಾಡಿದ ಅವರು, ಈ ನಾಡಿಗೆ ಮಳೆ ಬೆಳೆ ಸೌಖ್ಯ ತರಬೇಕು, ಎಲ್ರಿಗೂ ಅರೋಗ್ಯಕೊಟ್ಟು ಕಾಪಾಡಲಿ. ಎಲ್ರೂ ಪ್ರೀತಿ ಶಾಂತಿ ಸಹಬಾಳ್ವೆಯಿಂದ ಬಾಳಲು ತಾಯಿ ಆಶೀರ್ವಾದ ಎಲ್ರೀಗೂ ಇರಲಿ ಎಂದರು.
ಮೇ 23 ರ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಎಲ್ರೂ ದೇಶದ ಫಲಿತಾಂಶ ಏನಾಗುತ್ತೆ ಅಂತಾ ಮೇ23 ನ್ನೆ ಕಾಯ್ತಾ ಇದ್ದಾರೆ ದೇಶದಲ್ಲಿ ಏನಾಗುತ್ತೆ ಅಂತಾ, ಆದ್ರೆ ರಾಜ್ಯದಲ್ಲಿ ಈ ಫಲಿತಾಂಶದಿಂದ ಏನೂ ಆಗಲ್ಲ.ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ಹೋಗುತ್ತೆ ಅಂತಿದ್ರು.ಆದ್ರೆ ಅದೆಲ್ಲಾ ಸುಳ್ಳಾಗಿದೆ, ಈಗ್ಲೂ ಅಂತಿದ್ದಾರೆ ಅದೆಲ್ಲಾ ಸುಳ್ಳಾಗುತ್ತೆ ಎಂದು ನುಡಿದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಇನ್ನು ನಾಲ್ಕು ವರ್ಷದ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡ್ತಾರೆ. ಮೈತ್ರಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಡಿಸಿಎಂ ಆಗಿ ಪರಮೇಶ್ವರ್ ಮಂತ್ರಿಮಂಡಲ ಇರುತ್ತೆ ಎಂದು ಆಶಾ ಭಾವನೆ ವ್ಯಕ್ತ ಪಡಿಸಿದರು.
ತದನಂತರ ಮಂಡ್ಯದಲ್ಲಿ ಮೈತ್ರಿನಾಯಕರ ವಾಕ್ಸಮರ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಎಲ್ಲವು ಮುಗಿದು ಹೋಗಿವೆ ಅದೆಲ್ಲಾ ಮುಗಿದ ವಿಚಾರ.ಮೇ-,23 ರವರ ಫಲಿತಾಂಶದವರೆಗೂ ಕಾಯಿರಿ ಯಾರು ಪ್ರಧಾನಿಯಾಗ್ತಾರೆ ಅನ್ನೋದು ಗೊತ್ತಾಗುತ್ತೆ.ರಾಜ್ಯದಲ್ಲಿ ಹಾಗೂ ಮಂಡ್ಯದಲ್ಲಿ ನಡೆಯುತ್ತಿರುವ ಮೈತ್ರಿ ನಾಯಕರ ವಾಕ್ಸಮರ ಇಂದಿನಿಂದ ನಿಲ್ಲುತ್ತೆ. ಅವರೆಲ್ಲರಿಗೂ ಜ್ಞಾನೋದಯವಾಗಿದೆ ಅವರ್ಯಾರು ಮಾತನಾಡಲ್ಲ ಎಂದರು.
ಎಲ್ಲಾ ಹಿರಿಯುರು ಈಗಾಗಲೇ ಕುಳಿತು ಮಾತನಾಡಿದ್ದಾರೆ. ನಾವೆಲ್ಲರು ಒಗ್ಗಾಟ್ಟಾಗಿದ್ದು ಒಂದೆ ತಟ್ಟೆಯಲ್ಲಿ ಊಟ ಮಾಡುವ ಸನ್ನಿವೇಶವಿದ್ದು. ಸಣ್ಣ ಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡುವ ಹೋಗುವ ಮತನಾಡಿದ್ದಾರೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ6 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ6 days agoಕವಿತೆ | ದೇವರ ಹೂವು
-
ದಿನದ ಸುದ್ದಿ4 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ4 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

