ರಾಜಕೀಯ
ಶತದಿನ ಪೂರೈಸಿದ ರಾಜ್ಯ ಸರ್ಕಾರ: ಗಾಲಿ ಜನಾರ್ದನ ರೆಡ್ಡಿ ಹೇಳಿದ್ದೇನು ಗೊತ್ತಾ ?
ಸುದ್ದಿದಿನ, ಹುಬ್ಬಳ್ಳಿ: ಜಿಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮೀಶ್ರ ಸರ್ಕಾರ ಶತದಿನ ಪೂರೈಸಿರುವ ಕುರಿತು ಗಾಲಿ ಜನಾರ್ದನ ರೆಡ್ಡಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ನೂರು ದಿನ ಪೂರೈಸಿದೆ. ರಾಜ್ಯದ ಜನ ಅವರ ಅಧಿಕಾರದ ಶೈಲಿಯನ್ನು ನೋಡಿದ್ದಾರೆ. ಇನ್ನು ಸ್ವಲ್ಪ ದಿನಗಳ ಕಾಲ ಅವಕಾಶ ಕೊಟ್ಟು ನೋಡೋಣ. ಇದೇ ಸ್ಥಿತಿ ಮುಂದುವರಿದರೆ ಅವರಿಗೆ ತಕ್ಕ ಉತ್ತರ ಸಿಗಲಿದೆ ಎಂದರು.
ಕಳೆದ ಚುನಾವಣೆಯಲ್ಲಿಯೇ ಕಾರಣಾಂತರಗಳಿಂದ ಬಜೆಪಿಗೆ ಅಧಿಕಾರ ಕೈ ತಪ್ಪಿದೆ. ಮುಂದೆ ಕಾಲವೇ ಇದಕ್ಕೆ ಉತ್ತರ ನೀಡಲಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ
ಹೇಳಿಕೆ ನೀಡಿದ್ದಾರೆ.
ನಮ್ಮದು ಜನ ಸ್ನೇಹಿ ಸರ್ಕಾರ : ಡಿ.ಕೆ.ಶಿ
ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿಯ ಅಸಮಾಧಾನ
ರಾಜ್ಯ ಸಮ್ಮಿಶ್ರ ಸರ್ಕಾರ ರಚನೆಯಾದ ಆರಂಭದಿಂದಲೂ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕುತ್ತಾ ಬಂದಿದ್ದಾರೆ. ಈಗ ರಾಜ್ಯ ಸಮ್ಮಿಶ್ರ ಸರ್ಕಾರ ನೂರು ದಿನ ಪೂರೈಸಿದ್ದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಆಪಾದಿಸುತ್ತಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಒಳಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಎಂದು ದೂರುತ್ತಿದ್ದಾರೆ.
ಲೋಕಾಸಭೆ ಚುನಾವಣೆ : ಟಿಕೆಟ್ ಗಾಗಿ ಗದ್ದಲ ಮಾಡ್ಕೊಬೇಡಿ : ಡಿಕೆಶಿ ಸೂಚನೆ

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ4 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

