ದಿನದ ಸುದ್ದಿ

ಗಾಣಗಾಪುರ ದೇವಾಲಯ ; ಕಾಶಿ ಮಾದರಿಯಲ್ಲಿ ಅಭಿವೃದ್ಧಿ

Published

on

ಸುದ್ದಿದಿನ,ಕಲಬುರಗಿ:ಜಿಲ್ಲೆಯ ಅಫ್ಜಲಪುರ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ, ಗಾಣಗಾಪುರ ದೇವಾಲಯಕ್ಕೆ ಸೂಕ್ತ ಮೂಲ ಸೌಕರ್ಯ ಒದಗಿಸುವ ಮೂಲಕ ಕಾಶಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.

ಕಲಬುರಗಿಯಲ್ಲಿ ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಪ್ರಸಾದ ಯೋಜನೆಯಡಿ 83 ಕೋಟಿ 52 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version