Connect with us

ದಿನದ ಸುದ್ದಿ

ಗಾಂಧೀಜಿ, ಶಾಸ್ತ್ರೀಜಿ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳ ಬೇಕು | ಸಚಿವ ಸಿ.ಎಸ್.ಪುಟ್ಟರಾಜು

Published

on

ಸುದ್ದಿದಿನ,ಮಂಡ್ಯ : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹನೀಯರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನೆಹರು ಯುವ ಕೇಂದ್ರ, ಮಂಡ್ಯ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಗಾಂಧೀಜಿ ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವಾದ ಇವರುಗಳ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದಾಗ ಮಾತ್ರ ಅವರಿಗೆ ನಾವು ಸಲ್ಲಿಸುವ ಗೌರವ ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ನುಡಿದಂತೆ ನಡೆದವರು. ಜಗತ್ತಿನ ಎಲ್ಲಾ ಶ್ರೇಷ್ಠ ಧರ್ಮಗಳು ಮಾನವತೆಯ ಸಮಾನತೆ, ಭಾತೃತ್ವ ಹಾಗೂ ಸಹನೆಯ ಸದ್ಗುಣಗಳನ್ನು ಸಾರಿ ಸಾರಿ ಹೇಳುತ್ತವೆ. ಇದನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಸಚಿವರು ಸೇವೆ ಮಾಡುವುದರ ಮೂಲಕ ನಿನ್ನನ್ನು ನೀನು ಕಾಣಬಹುದಾಗಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಶೆಟ್ಟಿ ಅವರು ಸತ್ಯ, ಶಾಂತಿ, ಅಹಿಂಸೆ, ಸತ್ಯಾಗ್ರಹ ಮತ್ತು ಹೋರಾಟದ ಮೂಲಕವೇ ಜಗತ್ತನ್ನು ಗೆದ್ದವರು ಗಾಂಧೀಜಿ. ಯುಗ ಪುರುಷ, ಫಾದರ್ ಆಫ್ ದಿ ನೇಷನ್ ಎಂದು ಕರೆಸಿಕೊಂಡಿದ್ದು ಗಾಂಧೀಜೀಯವರ ಹೆಚ್ಚುಗಾರಿಕೆಯಾಗಿದೆ ಎಂದು ತಿಳಿಸಿದ ಅವರು ಶಾಸ್ತ್ರೀಜಿ ಅವರು ಕೇವಲ 19 ತಿಂಗಳು ಪ್ರಧಾನ ಮಂತ್ರಿಯಾಗಿದ್ದರೂ ಇಡೀ ಪ್ರಪಂಚವೇ ಮೆಚ್ಚುವಂತಹ ಆಳ್ವಿಕೆ ನಡೆಸಿದರು ಎಂದು ತಿಳಿಸಿದರು.

ಗಾಂಧೀಜಿ ಅವರ ಆದರ್ಶಗಳು ಹಾಗೂ ತತ್ವಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಳ್ಳಬೇಕು. ಇದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವನ್ನು ತಿಳಿಯಬೇಕಾದರೆ ಅವರು ನಡೆಸಿದ ಜೀವನವನ್ನು ತಿಳಿಯಬೇಕು ಎಂದು ಅವರು ತಿಳಿಸಿದರು.
ಜನಮನ ಸೆಳದ ಛಾಯಾಚಿತ್ರ ಪ್ರದರ್ಶನ

ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳು ವಿಶೇಷವಾಗಿತು. ಬಾಪು ಹುಟ್ಟು, ಶಿಕ್ಷಣ, ಬಾಲ್ಯಾ ಜೀವನ, ಕರ್ನಾಟಕದಲ್ಲಿ ಗಾಂಧೀಜಿ, ಅವರು ಆರಂಭಿಸಿದ ಸತ್ಯಾಗ್ರಹ, ಉಪವಾಸ ಈ ವಿಷಯಗಳ ಛಾಯಾಚಿತ್ರಗಳು ಹೆಚ್ಚಿನ ಸಾರ್ವಜನಿಕರನ್ನು ಆಕರ್ಷಿಸಿತು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಹಾಗೂ ಜನಪ್ರತಿಧಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಲಾದ ಗಾಂಧಿ ಆತ್ಮಚರಿತ್ರೆ ಕುರಿತ ಸಾಕ್ಷ್ಯಚಿತ್ರ ಹಾಗೂ ಛಾಯಾಚಿತ್ರವನ್ನು ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿಕ್ಕೆ ಅಭಿನಂದನೆ ಸಲ್ಲಿಸಿದರು.

ಅಲ್ಲದೇ ಆಯುಷ್ ಇಲಾಖೆಯಿಂದ ಆಯುರ್ವೇದ ಆರೋಗ್ಯ ಶಿಬಿರ ಈ ಬಾರಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನೆ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ, ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ.ವಿಜಯ್, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಾವಣ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಜುಲೈ 13 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಲು ಇಲಾಖೆ ವೆಬ್ ಸೈಟ್ dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆದು, ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ದೂರವಾಣಿ ಸಂ: 08192-250022, 080192-250066 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

Published

on

ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಕೆ.ವೇಲಾ ತಿಳಿಸಿದರು.

ಅವರು ಬುಧವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜಿ, ಸಂಧಾನ ನಡೆಸಲು ನ್ಯಾಯಾಂಗ ಇಲಾಖೆ ಮತ್ತು ವಕೀಲರ ಕಡೆಯಿಂದಲೂ ಪ್ರತ್ಯೇಕವಾಗಿ ಮಧ್ಯಸ್ಥಗಾರರು ಇರುವರು. ರಾಜಿ, ಸಂಧಾನ ನಡೆಸುವ ಅಧಿಕಾರವನ್ನು ಕಾನ್ಸಿಲೇಟರ್‍ಗಳಿಗೆ ನೀಡಲಾಗಿರುತ್ತದೆ. ಅದಾಲತ್‍ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದಾಲತ್‍ನಲ್ಲಿ ಇತ್ಯರ್ಥವಾಗುವ ಪ್ರಕರಣಗಳು ನ್ಯಾಯಾಲಯದಲ್ಲಿನ ತೀರ್ಪುಗಳಂತೆ ಇರುತ್ತದೆ. ಅದಾಲತ್‍ನಲ್ಲಿ ಇತ್ಯರ್ಥ ಮಾಡಿಕೊಂಡಲ್ಲಿ ಮತ್ತೆ ಅಪೀಲು ಹೋಗಲು ಅವಕಾಶ ಇರುವುದಿಲ್ಲ ಎಂದರು.

ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ, ಕೌಟುಂಬಿಕ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಲೋಕ ಅದಾಲತ್‍ನಲ್ಲಿ ಬಗೆಹರಿಸಲಾಗುವುದು. ಈ ದಿನಾಂಕಗಳ ಹೊರತಾಗಿಯೂ ಸತತವಾಗಿ ನಡೆಯುವ ಲೋಕ ಅದಾಲತ್ ಮುಖಾಂತರ ಕೂಡ ಕಕ್ಷಿದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಜುಲೈ 12 ರ ಎರಡನೇ ಶನಿವಾರವಾರ ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ ಅದಾಲತ್ ಪ್ರಕರಣಗಳ ರಾಜೀ ಸಂಧಾನ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ವಕೀಲರ ಸಹಕಾರದೊಂದಿಗೆ ಕಲಾಪ ನಡೆಸುವರು. ಇದೇ ರೀತಿ ತಾಲ್ಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಳ್ಳಲು ಈ ಲೋಕ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಹತ್ತು ಸಾವಿರ ಪ್ರಕರಣ ಇತ್ಯರ್ಥದ ಗುರಿ

ಜುಲೈ 12ರಂದು ನಡೆಯುವ ಲೋಕ ಅದಾಲತ್‍ನಲ್ಲಿ ರಾಜೀಯಾಗಬಲ್ಲ ಸುಮಾರು 10 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಕಳೆದ ಮಾರ್ಚ್‍ನಲ್ಲಿ ನಡೆದ ಲೋಕ ಅದಾಲತ್‍ನಲ್ಲಿ 10186 ಬಾಕಿ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ 187026 ಸೇರಿ ಒಟ್ಟು 197215 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿತ್ತು.

ಈಗ ಪ್ರಸ್ತುತ ಎಲ್ಲಾ ನ್ಯಾಯಾಲಯಗಳಲ್ಲಿ 45508 ಪ್ರಕರಣಗಳು ಬಾಕಿ ಇದ್ದು ರಾಜಿ, ಸಂಧಾನಕ್ಕಾಗಿ 12853 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥ ಮಾಡುವ ಗುರಿ ಹೊಂದಲಾಗಿದ್ದು ಇದರೊಂದಿಗೆ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಮಾಡಲಿದ್ದು ನಿಖರ ಅಂಕಿ ಅಂಶಗಳು ಶನಿವಾರ ಸಿಗಲಿವೆ ಎಂದರು.

ಲೋಕ್ ಅದಾಲತ್‍ನ್ನು ಜನತಾ ನ್ಯಾಯಾಲಯ ಎಂದು ಕರೆಯಲಾಗುತ್ತದೆ. ಜನತಾ ನ್ಯಾಯಾಲಯದಲ್ಲಿ ಸಮಯ, ಹಣ ಉಳಿತಾಯ, ಕಕ್ಷಿದಾರರು ಮತ್ತು ಎದುರುದಾರರಿಗೆ ಸಮಾಧಾನ ತರುವ ನ್ಯಾಯದಾನ ಸಿಗಲಿದೆ. ಮಾನವ ಸಂಬಂಧಗಳನ್ನು ಬೆಸೆಯಬೇಕು. ಸಣ್ಣ ವಿಷಯವನ್ನು ತೆಗೆದುಕೊಂಡು ಪ್ರತಿಷ್ಟೆಯಾಗಿ ಸ್ವೀಕರಿಸಿ ವರ್ಷಾನುಗಟ್ಟಲೆ ನ್ಯಾಯಾಲಯಕ್ಕೆ ಅಲೆದಾಡುವರು. ಇದಕ್ಕಾಗಿ ಹೆಚ್ಚು ಹೆಚ್ಚು ಜನರು ತಮ್ಮ ಪ್ರಕರಣಗಳ ಇತ್ಯರ್ಥಕ್ಕಾಗಿ ಲೋಕ್ ಅದಾಲತ್‍ನಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಅದಾಲತ್‍ನಲ್ಲಿ ಭಾಗವಹಿಸಲು ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂ.ಸಂ: 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿ ಹರಿಹರ ದೂ.ಸಂ: 08192-296885, ಹೊನ್ನಾಳಿ ದೂ.ಸಂ:08188-251732, ಚನ್ನಗಿರಿ ದೂ.ಸ 08189-229195 ಮತ್ತು ಜಗಳೂರು ದೂ.ಸ:08196-227600 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ತಹಶೀಲ್ದಾರ್ ಕೋರ್ಟ್, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕೋರ್ಟ್‍ನಲ್ಲಿ ಇದ್ದ ಅನೇಕ ಆಸ್ತಿ ಪ್ರಕರಣಗಳನ್ನು ಕಕ್ಷಿದಾರರು ಮತ್ತು ಎದುರುದಾರರಿಗೆ ಕಾನೂನು ಅವಕಾಶ, ದಾಖಲಾತಿಗಳ ಕುರಿತು ಮನವರಿಕೆ ಮಾಡಿಕೊಟ್ಟು ಕಡಿಮೆ ಸಮಯದಲ್ಲಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. ರಾಜಿ, ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಜನತೆಗೆ ಹಣ, ಸಮಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಲು ಸಹಾಯಕವಾಗಿಲಿದೆ. ಅಷ್ಟೇ ಅಲ್ಲದೇ ಜನತೆ, ರೈತರು ಆರ್ಥಿಕವಾಗಿ ಸದೃಢವಾಗಲು ಹೆಚ್ಚು ಸಹಾಯವಾಗಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಪ್ರತಿಯೊಬ್ಬ ನಾಗರೀಕನಿಗೂ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಹಲವಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಲೋಕ ಅದಾಲತ್ ಮೂಲಕ ಸರಳ ಮತ್ತು ಬಾಕಿ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ನ್ಯಾಯ ಒದಗಿಸಬಹುದಾಗಿದೆ ಎಂದರು.

ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಾಹಾವೀರ ಮ ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಕಾರ್ಯದರ್ಶಿ ಬಸವರಾಜ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

Published

on

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‍ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಘನುಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಧ ಶಾಮನೂರು.ಟಿ.ಬಸವರಾಜ್, ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ23 hours ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

ದಿನದ ಸುದ್ದಿ23 hours ago

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್...

ದಿನದ ಸುದ್ದಿ23 hours ago

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‍ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ...

ದಿನದ ಸುದ್ದಿ4 days ago

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ...

ದಿನದ ಸುದ್ದಿ7 days ago

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್...

ದಿನದ ಸುದ್ದಿ1 week ago

ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ...

ದಿನದ ಸುದ್ದಿ2 weeks ago

ಡ್ರಗ್ಸ್ ಕತ್ತಲೆ ಪ್ರಪಂಚ, ಈಗಿನ ಯುವ ಸಮೂಹ ಅರಿತು ದೂರವಿರಬೇಕು : ಐಜಿ ಡಾ: ರವಿಕಾಂತೇಗೌಡ

ಸುದ್ದಿದಿನ,ದಾವಣಗೆರೆ:ಡಗ್ಸ್ ಕತ್ತಲ ಪ್ರಪಂಚ, ಈ ಜಾಲದ ಬಗ್ಗೆ ಅರಿತು ಯುವ ಸಮೂಹ ದೂರವಿರಬೇಕೆಂದು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಡಾ.ಬಿ.ಆರ್ ರವಿಕಾಂತೇಗೌಡ ವಿದ್ಯಾರ್ಥಿಗಳಿಗೆ ತಿಳಿಸಿದರು. ಗುರುವಾರ(ಜೂನ್.26) ರಂದು...

ದಿನದ ಸುದ್ದಿ2 weeks ago

ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ : ನ್ಯಾಯಾಧೀಶೆ ವೇಲಾ ಡಿ.ಕೆ

ಸುದ್ದಿದಿನ,ದಾವಣಗೆರೆ:ಜಾಗತಿಕವಾಗಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದಾಗಿದ್ದು ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಲು ಇದರ ಸಾಗಾಟ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ...

ದಿನದ ಸುದ್ದಿ2 weeks ago

ಪೋನ್ – ಇನ್ ಕಾರ್ಯಕ್ರಮದಲ್ಲಿ‌ ಎಸ್ ಪಿ ಉಮಾ‌ ಪ್ರಶಾಂತ್ ; ನೇರ ಸಂವಾದಲ್ಲಿ ನೀವೂ ಪಾಲ್ಗೊಳ್ಳಿ

ಸುದ್ದಿದಿನ,ದಾವಣಗೆರೆ:ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ನಾಳೆ ಪೋನ್ –ಇನ್ ಕಾರ್ಯಕ್ರಮದ ಮೂಲಕ ನೇರಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆಯನ್ನು...

ದಿನದ ಸುದ್ದಿ2 weeks ago

ಎಸ್.ಎಸ್.ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ

ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು...

Trending