ರಾಜಕೀಯ
ನವಪೀಳಿಗೆಗೆ ಗಾಂಧಿಯ ಸತ್ಯ, ಅಹಿಂಸೆ, ಸಂದೇಶ ಸಾರಲು “ಗಾಂಧಿ ಸಂದೇಶ ಯಾತ್ರೆ” ಆರಂಭ : ಬಿ ಕೆ ಹರಿಪ್ರಸಾದ್
ಸುದ್ದಿದಿನ, ಬಿಹಾರ : ಬಿಹಾರದಲ್ಲಿ ಗಾಂಧೀಜಿಯವರು ಸ್ವಾತಂತ್ರ್ಯ ಚಳುವಳಿ ಪ್ರಾರಂಭಿಸಿದ “ಚಂಪಾರಣ್” ಸ್ಥಳದಿಂದ ಪ್ರಾರಂಭವಾಗಲಿರುವ “ಗಾಂಧಿ ಸಂದೇಶ ಯಾತ್ರೆಯ” ಪೂರ್ವಭಾವಿ ಕಾರ್ಯಕಾರಿಣಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಂಗಳವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿದರು.
ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಗತಿಸಿವೆ. ಈ ಹಿನ್ನಲೆಯಲ್ಲಿ ಪಕ್ಷ ದೇಶದಲ್ಲಿ ಸ್ವಾತಂತ್ರ್ಯ ಮಹೋತ್ಸವವನ್ನ ನಡೆಸಲು ಕಾಂಗ್ರೆಸ್ ಎಐಸಿಸಿ ನಿರ್ಧರಿಸಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ನಾನು ಹಾಗೂ ಹಿರಿಯರಾದ ಮುಕುಲ್ ವಾಸ್ನಿಕ್ ಅವರು ಸಹ ಸಂಚಾಲಕರಾಗಿದ್ದೇವೆ ಎಂದರು.
ಮಹಾತ್ಮ ಗಾಂಧಿಜೀಯವರು ಬ್ರಿಟಿಷರ ವಿರುದ್ಧ ರೈತ ಚಳುವಳಿಯನ್ನ ನಡೆಸಿದ ಪಶ್ಚಿಮ ಬಿಹಾರದ “ಚಂಪಾರಣ್” ಸ್ಥಳದಿಂದ “ಗಾಂಧಿ ಸಂದೇಶ ಯಾತ್ರೆ” ಯನ್ನ ಪ್ರಾರಂಭಿಸಲಿದ್ದೇವೆ. ಭಾರತ ಸ್ವಾತಂತ್ರ್ಯ ಚಳುವಳಿ ಹಾಗೂ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಬಗ್ಗೆ ಇಡೀ ಜಗತ್ತಿಗೆ ಪ್ರೇರಣೆಯಾಗಿದೆ. ಆದ್ದರಿಂದಲೇ ಜಗತ್ತಿನ 125ಕ್ಕೂ ಹೆಚ್ಚು ದೇಶಗಳಲ್ಲಿ ಇಂದಿಗೂ ಗಾಂಧೀಜಿ ಅವರ ಜನ್ಮದಿನವನ್ನ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ.
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದ 2014ರ ವರೆಗೆ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟ ಹಾಗೂ ಅಹಿಂಸಾತ್ಮಕ ಚಳುವಳಿಯ ಬಗ್ಗೆ ಇಡೀ ಜಗತ್ತಿನ ಮೂಲೆ ಮೂಲೆಯಲ್ಲಿ ಅವರ ವಿಚಾರಧಾರೆಗಳ ಬಗ್ಗೆ ವರ್ಣನೆ ಮಾಡಲಾಗುತ್ತಿತ್ತು. ಆದರೆ ಇಂದು ಭಾರತವನ್ನ ಇಡೀ ಜಗತ್ತು ಸೂಕ್ಷ್ಮವಾಗಿ ಗಮನಿಸುತ್ತಿದೆ. ನೋಡುವಂತಹ ದೃಷ್ಟಿಕೋನ ಬದಲಾಗಿದೆ ಎಂದು ಹೇಳಿದರು.
ಭಾರತ ಇಂದು ಕವಲುದಾರಿಯಲ್ಲಿ ನಿಂತಿದೆ. ಮಹಾತ್ಮ ಗಾಂಧಿಯವರ ಸತ್ಯ, ಅಹಿಂಸೆಯ ಮಾರ್ಗದಲ್ಲಿ ನಡೆಯಬೇಕೋ ಅಥವಾ ಗೋಡ್ಸೆಯ ಸುಳ್ಳು, ಹಿಂಸೆಯ ಮಾರ್ಗದಲ್ಲಿ ನಡೆಯಬೇಕೆಂಬ ವಿಚಾರಧಾರೆಗಳ ಮಧ್ಯೆ ನಿಂತಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ 2014ರವರೆಗೂ ಜಗತ್ತಿನಲ್ಲಿ ಹಾಗೂ ದೇಶದಲ್ಲಿ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸಾತ್ಮಕ ಹೋರಾಟದ ಬಗ್ಗೆ ಹೆಮ್ಮೆ ಪಟ್ಟಿದೆ.
ಆದರೆ ಇಂದು ಗಾಂಧೀಜಿಯವರನ್ನ ಕೊಂದ “ನಾಥುರಾಮ್ ಗೋಡ್ಸೆ ಒಬ್ಬ ದೇಶಭಕ್ತ” ಎಂದು ಭೋಪಾಲ್ ನ ಲೋಕಸಭಾ ಸಂಸದರು ಹೇಳಿಕೆ ಕೊಡುತ್ತಿದ್ದಾರೆ. ಗೋಡ್ಸೆಯ ದೇವಸ್ಥಾನ ಕಟ್ಟಿಸಲು ಮುಂದಾಗುತ್ತಿದ್ದಾರೆ. ಪ್ರಧಾನಮಂತ್ರಿಗಳಿಂದ ಹಿಡಿದು ಬಿಜೆಪಿಯ ಎಲ್ಲಾ ಮಂತ್ರಿಗಳವರೆಗೆ ಸುಳ್ಳು ಹೇಳುವ ಮೂಲಕ, ಗಾಂಧೀಜಿಯವರನ್ನ ಅಪಮಾನ ಮಾಡುವುದರಲ್ಲಿ ಯಾರೂ ಹಿಂದೆ ಬಿದ್ದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಭಾರತದ ನವ ಪೀಳಿಗೆ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸಾ ಚಳುವಳಿ, ಸ್ವಾತಂತ್ರ್ಯ ಹೋರಾಟ, ವಿಚಾರ ಧಾರೆಗಳ ಬಗ್ಗೆ ಅರ್ಥೈಸಿಕೊಳ್ಳಬೇಕಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಮಹೋತ್ಸವದ ಹೆಸರಿನಲ್ಲಿ ಗಾಂಧೀ ಸಂದೇಶ ಯಾತ್ರೆಯನ್ನ ನಡೆಸಲು ಯುವ ಕಾಂಗ್ರೆಸ್ ನೇತೃತ್ವವಹಿಸಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 1942ರಲ್ಲಿ ಬ್ರಿಟಿಷ್ ಕ್ವಿಟ್ ಇಂಡಿಯಾ ಚಳುವಳಿ ನಡೆಯುತ್ತಿದ್ದರೆ ಅಟಲ್ ಬಿಹಾರಿ ವಾಜಪೇಯಿ, ವೀರ ಸಾವರ್ಕರ್ ಸೇರಿದಂತೆ ಬಿಜೆಪಿಯ ಮುಖಂಡರುಗಳು ಸ್ವಾತಂತ್ರ್ಯ ಚಳುವಳಿಯ ವಿರುದ್ಧ ಇದ್ದವರು.
ಆಗ ಗಾಂಧೀಜಿಯವರು, ಪಂಡಿತ್ ನೆಹರೂ, ಸೇರಿದಂತೆ ಯಾರೂ ಕೂಡ ಅವರನ್ನ ದೇಶದ್ರೋಹಿ ಎಂದು ಕರೆಯಲಿಲ್ಲ. ಆದರೆ ಈಗ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ಎಂದು ಕರೆ ನೀಡುತ್ತಿದ್ದಾರೆ. ಪತ್ರಕರ್ತರು ಪ್ರಶ್ನೆ ಮಾಡಿದರೆ ಜೈಲಿಗೆ ಹಾಕಲಾಗುತ್ತಿದೆ. ಪ್ರಧಾನಿಯನ್ನ ಪ್ರಶ್ನೆ ಮಾಡಿದರೆ ಹೇಗೆ ದೇಶದ್ರೋಹಿಯಾಗುತ್ತೇವೆ? ಇಂತಹ ಹೊಸ ಪರಂಪರೆಯನ್ನ ನಾವು ಎಂದೂ ಆಲೋಚಿಸಿರಲಿಲ್ಲ ಎಂದು ಕಿಡಿಕಾರಿದರು.
ಧರ್ಮ-ಧರ್ಮಗಳ ಮಧ್ಯೆ ವಿಷಬೀಜ ಬಿತ್ತಲಾಗುತ್ತಿದೆ. ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಲಾಗುತ್ತಿದೆ, ಸಂವಿಧಾನದ ವಿರುದ್ಧ ಘೋಷಣೆಗಳನ್ನ ಕೂಗಲಾಗುತ್ತಿದೆ. 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಎಸ್ ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಸ್ವಯಂ ಹೇಳಿಕೆ ನೀಡಿದ್ದರು” ಸಂವಿಧಾನ ಬದಲಾವಣೆ ಮಾಡುತ್ತೇವೆ” ಎಂದು.
ಕರ್ನಾಟಕದ ಒಬ್ಬ ಸಂಸದ ಕೇಂದ್ರ ಸಚಿವರಾಗಿದ್ದಾಗ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ “ನಾವು ಬಂದಿದ್ದೇ ಸಂವಿಧಾನವನ್ನ ಬದಲಾವಣೆ ಮಾಡಲು”. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಲಕ್ಷಾಂತರ ಜನರ ತ್ಯಾಗ, ಬಲಿದಾನವನ್ನ ದೇಶದ ಜನರಿಗೆ ಮನವರಿಕೆ ಮಾಡುವ ಅಗತ್ಯತೆ, ಅನಿವಾರ್ಯತೆ ಹೆಚ್ಚಿದೆ.
ಪತ್ರಿಕಾಗೋಷ್ಠಿಯಲ್ಲಿ ಬಿಹಾರ ಎಐಸಿಸಿ ಉಸ್ತುವಾರಿ ಶ್ರೀ ಭಕ್ತ್ ಚರಣ್ ದಾಸ್, ಬಿಹಾರ ಪ್ರದೇಶ ಸಮಿತಿ ಅಧ್ಯಕ್ಷ ಡಾ ಮದನ್ ಮೋಹನ್ ಝಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.




