ದಿನದ ಸುದ್ದಿ
ಗಣೇಶ ಚತುರ್ಥಿ; ಗಣೇಶ ಪ್ರತಿಷ್ಠಾಪನೆಗೆ ಸಿದ್ಧವಾಯ್ತು ಭವ್ಯವಾದ ಮಂಟಪ
ಸುದ್ದಿದಿನ ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ವಿವಿಧ ತರಹ ಗಣಪ ಮೂರ್ತಿಗಳ ಪ್ರತಿಷ್ಠಾಪನೆಗೊಂಡಿದ್ದು, ನಾಗರಿಕರ ಆಕರ್ಷಣೀಯ ಕೇಂದ್ರ ಬಿಂದುಗಳಾಗಿ ಗಮನ ಸೆಳೆದಿವೆ. ದಾವಣಗೆರೆಯ ವಿವಿಧ ಬಡಾವಣೆ, ನಗರ, ಕಾಲೊನಿಗಳಲ್ಲಿ ತರಾವರಿ ಗಣಪನ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ. ಅವುಗಳಲ್ಲಿ ಹಿಂದು ಮಹಾಸಭಾದ ಗಣಪ ವಿಶಿಷ್ಟ, ಆಕರ್ಷಣೀಯ ಕೇಂದ್ರವಾಗಿದೆ.
ಪ್ರತಿ ವರ್ಷ ರಾಂ ಆಂಡ್ ಕೋ ವೃತ್ತದಲ್ಲಿ ಪ್ರಯಿಷ್ಠಾಪನೆಗೊಳ್ಳುತ್ತಿದ್ದ ಈ ಬಾರಿ ಸ್ಥಳಾಂತರ ಗೊಂಡಿದ್ದು, ವಿಶಾಲವಾದ ಹೈಸ್ಕೂಲ್ ಮೈದಾನಕ್ಕೆ ಬಂದಿದ್ದಾನೆ. ಹಿಂದು ಮಹಾಸಭಾ ಈ ಬಾರಿ ಹೈಸ್ಕೂಲ್ ಮೈದಾನದಲ್ಲಿ ಭವ್ಯವಾದ ಮಂಟಪ ನಿರ್ಮಾಣ ಮಾಡಲಾಗಿದೆ.
60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಯ್ತು ಭವ್ಯವಾದ ಮಂಟಪ:
ಅಂದಾಜು 60 ಲಕ್ಷ ರೂ. ವೆಚ್ಚದಲ್ಲಿ 35×30 ಅಡಿ ಸುತ್ತಳತೆಯ ವೇದಿಕೆ ಹಾಗೂ 50×100 ಅಡಿ ಸುತ್ತಳತೆಯ ಭವ್ಯ ಸಭಾಂಗಣದಲ್ಲಿ ಒಡಿಶಾದ ಕೃಷ್ಣ ದೇವಾಲಯದ ಮಾದರಿಯ ಮಂಟಪ ನಿರ್ಮಾಣವಾಗಿದೆ. ಇದನ್ನು ನೋಡುವುದೇ ಕಣ್ಣುಗಳಿಗೆ ಒಂದು ಹಬ್ಬ. ಈ ಭವ್ಯವಾದ ಮಂಟಪವನ್ನು ಪಶ್ಚಿಮ ಬಂಗಾಳದ ಬರ್ದ್ವಾನ್ ಜಿಲ್ಲೆಯ ಕಟ್ವಾದ ಸತ್ಯನಾರಾಯಣದತ್ತ ಮತ್ತವರ ನಿರ್ಮಾಣ ಮಾಡಿದೆ. ಅಂದಾಜು 60 ಅಡಿ ಎತ್ತರದ ಮಂಟಪ ನಿರ್ಮಾಣಕ್ಕೆ ನಾಲ್ಕು ಸಾವಿರ ಪೋಲ್ಸುಗಳನ್ನು ಬಳಸಲಾಗಿದೆ. ಇಲ್ಲಿ 13 ಅಡಿ ಎತ್ತರದ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
ಮೂಕಾಸುರನ ಸಂಹಾರ ರೂಪಕ ಪ್ರದರ್ಶನ:
ಪ್ರತಿ ವರ್ಷವೂ ಒಂದಿಲ್ಲೊಂದು ಕಥಾರೂಪಕ ಪ್ರದರ್ಶನ ಮಾಡುವ ಹಿಂದು ಮಹಾಸಭಾ, ಈ ಬಾರಿ ಮೂಕಾಸುರ ಸಂಹಾರ ರೂಪಕ ಪ್ರದರ್ಶನ ಏರ್ಪಡಿಸಿದೆ. ಮೂಕಾಸುರನ ಸಂಹಾರದ ಕಥೆ ಆರಾಧಾರಿತ ರೂಪಕ ಪ್ರತಿದಿನ ಸಂಜೆ 10 ನಿಮಿಷ ಪ್ರದರ್ಶನಗೊಳ್ಳಲಿದೆ. ಕಳೆದ ಬಾರಿ ರೇಣುಕಾ ಎಲ್ಲಮ್ಮ ಚರಿತ್ರೆ ಪ್ರದರ್ಶನವಾಗಿತ್ತು. ಮಂಟಪದ ಮುಂಭಾಗ ಮಕ್ಕಳಿಗೆ ಮನರಂಜನೆಗಾಗಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ7 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ7 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ7 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ7 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ7 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ