ದಿನದ ಸುದ್ದಿ
ಗಣೇಶ ಚತುರ್ಥಿ | ಕೆರೆ,ನದಿ,ಬಾವಿಗಳಲ್ಲಿ ವಿಗ್ರಹ ವಿಸರ್ಜನೆ ನಿಷೇಧ
ಸುದ್ದಿದಿನ,ದಾವಣಗೆರೆ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿಗ್ರಹಗಳು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಜಲ ಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮಾಲಿನ್ಯ ಉಂಟಾಗುವುದರಿಂದ ಕಾನೂನಿನ್ವಯ ಯಾವುದೇ ಜಲಗಳಲ್ಲಿ, ನದಿ, ಕಾಲುವೆ/ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ವಿಗ್ರಹಗಳಲ್ಲಿ ಉಪಯೋಗಿಸಿದ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮತ್ತು ಬಳಸುವ ರಾಸಾಯನಿಕ ಬಣ್ಣಗಳಿಂದ ಆಗುತ್ತಿದ್ದು, ಇದರಿಂದ ಜಲ ಮೂಲಗಳ ಭೌತಿಕ ಮತ್ತು ರಾಸಾಯನಿಕ ಗುಣಗಳು ಮಾರ್ಪಟ್ಟಿರುತ್ತದೆ. ಇದರಿಂದ ಜಲ ಮೂಲಗಳ ಮೇಲೆ ಅವಲಂಬಿತವಾದ ಪಶು, ಪಕ್ಷಿ, ಪ್ರಾಣಿಗಳು ಮತ್ತು ಇತರೆ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದರಿಂದ ಹಾಗೂ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆಯಾಗುವುದರಿಂದ ಇಂತಹ ಕ್ರಿಯೆಗಳನ್ನು ತಡೆಯುವುದು ಅತ್ಯಾವಶ್ಯಕವಾಗಿರುತ್ತದೆ.
ಆದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಪ್ರಕಾರ ಕಲಂ 33 (ಅ)ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಯಾವುದೇ ಕೆರೆ, ಜಲಮೂಲ, ನದಿ, ಕಾಲುವೆ/ಬಾವಿಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ.
ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿರುತ್ತದೆ. ಆದ್ದರಿಂದ ಆಗಸ್ಟ್ 22 ರಿಂದ ದಾವಣಗೆರೆ ಜಿಲ್ಲೆಯಲ್ಲಿ ಆಚರಿಸಲಿರುವ ಗಣೇಶ ಚತುರ್ಥಿಯನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ ಸಂರಕ್ಷಣೆಗಾಗಿ ಪರಿಸರ ಸ್ನೇಹಿಯಾಗಿ ಆಚರಿಸಲು ಕೆಳಕಂಡ ಅನುಸರಣಾ ಮಾರ್ಗಸೂಚಿಗಳನ್ನು ಅನುಸರಿಸಲು ಕೋರಲಾಗಿದೆ.
ಮಾರ್ಗಸೂಚಿ
- ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಇರುವ ಅರಿಶಿನದಲ್ಲಿ ಗಣೇಶ ಮೂರ್ತಿಯನ್ನು ತಯಾರಿಸಿ, ಮನೆಯಂಗಳದಲ್ಲಿ ವಿಸರ್ಜಿಸಿ ಪರಿಸರ ಮಾಲಿನ್ಯ ನಿರ್ಮೂಲನೆಗೆ ಸಹಕರಿಸಬೇಕು.
- ಈ ಸಾಲಿನ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು.
- ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಹಾಗೂ ಆರೋಗ್ಯ ಸ್ನೇಹಿ ಅರಿಶಿನ ಗಣೇಶಮೂರ್ತಿಗಳೊಂದಿಗೆ ಹಬ್ಬ ಆಚರಿಸುವುದು.
- ಸಾರ್ವಜನಿಕರು ಚಿಕ್ಕ ಮತ್ತು ಚೊಕ್ಕ ಅರಿಶಿನ ಗಣೇಶ ಮೂರ್ತಿಗಳನ್ನು ಮನೆಗಳಲ್ಲಿ ಪ್ರತಿಷ್ಟಾಪಿಸಿ ಮನೆಯಂಗಳದಲ್ಲಿಯೇ ವಿಸರ್ಜಿಸಿ, ವಿಸರ್ಜನಾ ನೀರಿನಿಂದ ಮನೆ ಶುದ್ದೀಕರಿಸಿ.
- ಸಾರ್ವಜನಿಕರು ಗಣೇಶ ಮೂರ್ತಿ ಪ್ರತಿಷ್ಟಾಪನೆ ಪರಿಸರಸ್ನೇಹಿ ವಸ್ತುಗಳ ಬಳಕೆ ಮತ್ತು ಸಾಂಪ್ರದಾಯಿಕವಾಗಿ ಆಚರಿಸುವುದು.
ಜಿಲ್ಲೆಯಲ್ಲಿ ಕಳೆದ ವರ್ಷ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾರಾಟ ಮಾಡದಂತೆ ನಿರ್ಬಂಧಿಸಿ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವುದು ಹಾಗೂ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ದ ಪರಿಸರ ಸಂರಕ್ಷಣಾ ಕಾಯ್ದೆ 1986 ರಡಿಯಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಬಾರದು.
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೇ, ಮನೆಗಳಲ್ಲಿಯೇ ಅರಿಶಿಣದಿಂದ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿದ ಮತ್ತು ಸಾಧ್ಯವಾದಷ್ಟು ಗರಿಷ್ಟ 2 ಅಡಿ ಎತ್ತರದ ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸುವಂತೆ ಮನವಿ ಮಾಡುತ್ತಾ, ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಬಳಕೆ ಪ್ರಮಾಣವನ್ನು ಮತ್ತಷ್ಟು ಕಡಿಮೆ ಮಾಡಿ ಶೂನ್ಯ ಪ್ರಮಾಣಕ್ಕೆ ಇಳಿಸುವಲ್ಲಿ ಸಹಕಾರ ಅಗತ್ಯವಾಗಿದೆ ಎಂದು ಪರಿಸರ ಅಧಿಕಾರಿ ಕೆ.ಬಿ.ಕೊಟ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ8 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

