Connect with us

ದಿನದ ಸುದ್ದಿ

ದಾವಣಗೆರೆ | ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ;ಪಟ್ಟಣದಾದ್ಯಂತ್ಯ ಸಿಸಿ ಕ್ಯಾಮೆರಾ : ಡಿಸಿ ಜಿ.ಎಂ. ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಶಾಂತಯುತ, ಸೌಹಾರ್ಧ ಹಾಗೂ ಸಂಭ್ರಮದಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಜನರಲ್ಲಿ ಮನವಿ ಮಾಡಿದರು.

ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬುಧುವಾರ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಗರೀಕ ಸೌಹಾರ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣೇಶ ಚತುರ್ಥಿಯನ್ನು ಪ್ರತಿ ವರ್ಷದ ಆಚರಣೆಯಂತೆ ಹಾಗೂ ಸಾಂಪ್ರದಾಯಿಕವಾಗಿ ಈ ವರ್ಷವೂ ಆಚರಿಸಬೇಕು.

ಸಾರ್ವಜನಿಕವಾಗಿ ಗಣೇಶನ ಮೂರ್ತಿ ಪ್ರತಿಷ್ಟಾಪಿಸುವ ಪ್ರತಿಯೊಬ್ಬರು ಸಂಬಂಧ ಪಟ್ಟ ಇಲಾಖೆಯಿಂದ ಅನುಮತಿ ಪಡೆದುಕೊಂಡು ಪರಿಸರಕ್ಕೆ ಮಾರಕವಾಗಿರುವ ಪಿಓಪಿ ಗಣೇಶ ಮೂರ್ತಿಗಳ ಬಳಕೆ ಮಾಡದೇ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಟಾಪಿಸಬೇಕು ಎಂದು ತಿಳಿಸಿದರು.

ಸರ್ಕಾರ ಈಗಾಗಲೇ ಹಬ್ಬದ ಆಚರಣೆಗೆ ನಿರ್ದೇಶನಗಳನ್ನು ನೀಡಿದ್ದು, ಗಜಾನನ ಉತ್ಸವ ಸಮಿತಿಯವರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೆಂಡಾಲ್ ನಿರ್ಮಿಸಬೇಕು, ಪೆಂಡಾಲಗಳಲ್ಲಿ ಅವಘಡ ಸಂಭವಿಸದಂತೆ ಎಚ್ಚರವಹಿಸಬೇಕು, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಬಾರದು. ಮೂರ್ತಿ ಪ್ರತಿμÁ್ಠಪನೆಗೆ ಧ್ವನಿವರ್ಧಕಗಳ ಬಳಕೆಗೆ ಅಧಿಕೃತವಾಗಿ ಪರವಾನಗಿ ಪಡೆಯಬೇಕು. ಹಸಿರು ಪಟಾಕಿ ಬಳಸಿ. ಆಸ್ಪತ್ರೆ, ಶಾಲಾ, ಕಾಲೇಜು ಅಕ್ಕಪಕ್ಕದಲ್ಲಿ ಪಟಾಕಿ ಸಿಡಿಸುವಂತಿಲ್ಲ. ಮತ್ತು ಸುರಕ್ಷತೆ ದೃಷ್ಟಿಯಿಂದ ಪಟ್ಟಣದಾದ್ಯಂತ್ಯ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಲಾಗುವುದು. ಗಣೇಶ ವಿಸರ್ಜನೆಗೆ ನಿಗಧಿ ಮಾಡುವ ರಸ್ತೆಯನ್ನು ಬದಲಿಸಬಾರದು. ನಿಗದಿತ ಸಮಯದಲ್ಲಿಯೇ ಗಣೇಶ ಮೂರ್ತಿ ವಿಸರ್ಜನೆ ಮಾಡಬೇಕು ಎಂದರು.

ಯಾವುದೇ ರೀತಿಯಾಗಿ ದಾರಿ ಮಧ್ಯದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿμÁ್ಠಪಿಸಿ ಜನರಿಗೆ ಓಡಾಡಲು ತೊಂದರೆಯಾಗುವಂತೆ ಮಾಡಬಾರದು ಪ್ರತಿಯೊಬ್ಬರು ಯಾವುದೇ ರೀತಿಯಾಗಿ ಅಹಿತಕರ ಘಟನೆಗಳು ಸಂಭವಿಸದಂತೆ ಗಣೇಶನ ಚತುರ್ಥಿ ಆಚರಣೆ ಮಾಡಿ ಎಂದು ತಿಳಿಸಿದರು.

ಸಮಾಜದ ಮುಖಂಡರು ಹಾಗೂ ಹಿರಿಯರು ಯುವಕರಿಗೆ ತಿಳಿವಳಿಕೆಯನ್ನು ನೀಡಿ ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ವಾಟ್ಸ್‍ಪ್ ಮೂಲಕ ಬರುವ ಅನಗತ್ಯ ವಿಷಯಗಳನ್ನು ನಂಬಬಾರದು, ಒಂದು ವೇಳೆ ಅನಗತ್ಯ ಸಂದೇಶಗಳನ್ನು ಫಾರ್ವರ್ಡ್ ಮಾಡುವವರ ಬಗ್ಗೆ ತಿಳಿದುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಮಾಜ, ಕಾನೂನು, ದೇಶ , ಹಾಗೂ ಸಂವಿಧಾನ ಬಿಟ್ಟು ನಾವ್ಯಾರೂ ದೊಡ್ಡವರಲ್ಲ, ಆದ್ದರಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಎಲ್ಲ ವರ್ಗದ ಜನರು ವ್ಯವಸ್ಥೆಗೆ ಸಹಕರಿಸಿ ಪರಸ್ಪರ ಗೌರವ ಕೊಟ್ಟು ತಾವೆಲ್ಲರೂ ಶಾಂತಯುತವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ ಗಣೇಶ ಉತ್ಸವÀಗಳು ನಮ್ಮ ಸಂಸ್ಕøತಿ, ಸಂಪ್ರದಾಯಗಳನ್ನು ಬಿಂಬಿಸುವ ಉತ್ಸವಗಳಾಗಬೇಕು, ವಿನಾಕಾರಣ ಗೊಂದಲದ ವಾತಾವರಣ ಸೃಷ್ಟಿಯಾಗಬಾರದು. ಪೆÇಲೀಸ್ ಇಲಾಖೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಗಣೇಶ ಪ್ರತಿಷ್ಟಾಪಿಸಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು, ಅದು ನಿಮಗೂ, ನಮಗೂ ಹೆಚ್ಚು ಅನುಕೂಲ, ಯಾವುದೇ ರೀತಿ ಅಹಿತಕರ ಘಟನೆಗಳು ನಡೆದಯಂತೆ ತಡೆಯಬಹುದಾಗಿದೆ ಎಂದು ಹೇಳಿದರು.

ಸಾರ್ವಜನಿಕವಾಗಿ ವಿವಿಧ ಸಂಘ ಸಂಸ್ಥೆಗಳು ಗಣೇಶ ಪ್ರತಿಷ್ಟಾಪಿಸುವ ಮುನ್ನ ಪಾಲಿಸಬೇಕಾದ ನಿಯಮ ಹಾಗೂ ನಿಬಂಧನಗಳನ್ನು ಪಾಲಿಸಬೇಕು, ಮುಖ್ಯವಾಗಿ ಗಣೇಶ ಪ್ರತಿಷ್ಟಾಪಿಸುವ ಸ್ಥಳದ ಮಾಹಿತಿ ಹಾಗೂ ಸ್ಥಳದ ಮಾಲೀಕರಿಂದ, ಪೊಲೀಸ್ ಇಲಾಖೆಯ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು.

ಗಣೇಶ ಹಬ್ಬವನ್ನು ಶ್ರದ್ದಾಭಕ್ತಿ, ಶಾಂತಿ ಮತ್ತು ಸೌಹಾರ್ಧತೆಯ ಸಂಕೇತವಾಗಿ ಆಚರಿಸಬೇಕು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬಗಳ ಆಚರಣೆಯಲ್ಲಿ ದುಂದು ವೆಚ್ಚಗಳಿಗೆ ಅವಕಾಶ ನೀಡದೇ ಧಾರ್ಮಿಕತೆ ಸಾರುವಂತಿರಬೇಕು. ಭಾವೈಕ್ಯತೆ ಬಿತ್ತುವ ಮೂಲಕ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಆಚರಣೆ ಮಾಡಬೇಕು. ಇಂತಹ ಅವಕಾಶಗಳ ಬಳಕೆ ಮಾಡಿಕೊಂಡು ಶಾಂತಿ ಕದಡಲು ಪ್ರಯತ್ನಿಸುವ ಕಿಡಿಗೇಡಿಗಳ ಮೇಲೆ ಇಲಾಖೆ ಹೆಚ್ಚಿನ ನಿಗಾ ವಹಿಸುತ್ತದೆ, ಇಲಾಖಾ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಗಣೇಶ ವಿಸರ್ಜನೆ ವೇಳೆ ಕರ್ಕಶವಾದ ಸದ್ದು ಮಾಡುವುದು ನಿಷೇಧಿಸಲಾಗಿದೆ, ಹಿರಿಯರು, ಆನಾರೋಗ್ಯದಿಂದ ಬಳಲುತ್ತಿರುವ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಬೇಕೆಂದರು.

ಸಮಾಜದ ಮುಖಂಡರು ಹಾಗೂ ಹಿರಿಯರು ಯುವಕರಿಗೆ ತಿಳಿವಳಿಕೆಯನ್ನು ನೀಡಿ ಈದ್-ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ಧತೆಯಿಂದ ಆಚರಿಸಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಆಯುಕ್ತರಾದ ರೇಣುಕಾ ಮಾತನಾಡಿ ಮನೆಗಳಲ್ಲಿನ ಚಿಕ್ಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಪ್ರಮುಖ ಸರ್ಕಲ್‍ಗಳಲ್ಲಿ 30 ಮೊಬೈಲ್ ಟ್ಯಾಂಕರ್‍ಗಳನ್ನು ಅಳವಡಿಸಲಾಗಿರುತ್ತದೆ. ವಿಸರ್ಜನೆ ಮಾಡುವ ವೇಳೆ ಒಂದು ಕಡೆ ಮೂರ್ತಿ ಕೊಡುವುದು, ಇನ್ನೊಂದು ಕಡೆ ಹೂವು, ಪೇಟ ಇತ್ಯಾದಿಗಳನ್ನು ಕೊಡಬೇಕು. ಹಾಗೂ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಶಿರಮಗೊಂಡನಹಳ್ಳಿಯಲ್ಲಿ ಟ್ಯಾಂಕರ್‍ಗಳನ್ನು ಅಳವಡಿಸಲಾಗಿದೆ. ಮತ್ತು ಪಾಕಿರ್ಂಗ್ ಕುಡಿಯುವ ನೀರು, ಲೈಟ್, ಸಿ.ಸಿ ಕ್ಯಾಮೆರಾಗಳ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ತಿಳಿಸಿದರು.

ಪಾಲಿಕೆಯಲ್ಲಿ ಮೂವರು ಅಧಿಕಾರಿಗಳನ್ನು ನೇಮಿಸಿ, ಗಣೇಶ ಮೂರ್ತಿ ಪ್ರತಿಷ್ಟಾಪಿಸಲು ಬೇಕಾದ ಎನ್.ಓ.ಸಿ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪ ವಿಭಾಗಾಧಿಕಾರಿ ಸಂತೋಷ ಪಾಟೀಲ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ ಮಂಜುನಾಥ್ ಹಾಗೂ ಇನ್ನಿತರೆ ಪೊಲೀಸ್ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending