ದಿನದ ಸುದ್ದಿ
ಸರ್ಕಾರದಿಂದ ಈ ಮಾರ್ಗಸೂಚಿಗಳಂತೆ ಗಣೇಶ ಹಬ್ಬ ಆಚರಿಸಿ
ಸುದ್ದಿದಿನ, ಬೆಂಗಳೂರು: ಗಣೇಶೋತ್ಸವ ಹಿನ್ನೆಲೆ ರಾಜ್ಯ ಸರ್ಕಾರ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಗಣೇಶನ ಮೂರ್ತಿಯನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ.
ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವಂತಿಲ್ಲ. ಮೂರ್ತಿಯನ್ನು ಕೆರೆ, ಬಾವಿ, ಕೊಳಗಳಲ್ಲಿ ವಿಸರ್ಜಿಸುವಂತಿಲ್ಲ. ಮನೆಯಲ್ಲಿಯೇ ಪ್ರತಿಷ್ಠಾಪಿಸಿ, ಮನೆಯಲ್ಲೇ ವಿಸರ್ಜಿಸಬೇಕು. ಆಚರಣೆ ವೇಳೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಸ್ಥಳವನ್ನು ನಿತ್ಯ ಸ್ಯಾನಿಟೈಸ್ ಮಾಡಬೇಕು ಎಂದು ಸೂಚಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243