ದಿನದ ಸುದ್ದಿ
ಮಾನವೀಯತೆಯೇ ನಿಜವಾದ ಸರ್ವ ಶ್ರೇಷ್ಠ ಧರ್ಮ : ಗಂಗಾಧರ ಬಿ.ಎಲ್ ನಿಟ್ಟೂರ್
ಸುದ್ದಿದಿನ,ದಾವಣಗೆರೆ : ಆ ಧರ್ಮ – ಈ ಧರ್ಮದ ಗೊಡೆವೆಗಿಂತ ಮಾನವೀಯ ಧರ್ಮವನ್ನೇ ಎಲ್ಲರೂ ಅನುಸರಿಸಬೇಕಿದೆ. ಅದೇ ನಿಜವಾದ ಮತ್ತು ಸರ್ವ ಶ್ರೇಷ್ಠ ಧರ್ಮ ಎಂದು ಲೇಖಕ ಗಂಗಾಧರ ಬಿ.ಎಲ್ ನಿಟ್ಟೂರ್ ಅಭಿಪ್ರಾಯ ಪಟ್ಟರು.
ನಗರದ ವಿದ್ಯಾನಗರ ಪಾರ್ಕ್‍ನ ಕಾವ್ಯಮಂಟಪದಲ್ಲಿ ಗ್ರಂಥಸರಸ್ವತಿ ಪ್ರತಿಭಾರಂಗದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಚಾರ ಗೋಷ್ಠಿಯಲ್ಲಿ “ಸಮಕಾಲೀನ ಸಂದರ್ಭದಲ್ಲಿ ಮಾನವೀಯ ಧರ್ಮ” ವಿಷಯ ಕುರಿತು ಮಾತನಾಡಿದ ಅವರು, ಇತಿ ಮಿತಿಗಳನ್ನು ಮರೆತು ಅತಿರೇಕದ ಸ್ಥಿತಿ ತಲುಪಿರುವ ಸಮಕಾಲೀನ ಸಂದರ್ಭದಲ್ಲಿ ಮಾನವೀಯ ಧರ್ಮವೊಂದೇ ಸರ್ವರನ್ನು ಬೆಸೆಯುವ ಕೊಂಡಿಯಾಗಬಲ್ಲದು ಎಂದರು.
ಪರರ ಮೇಲೆ ಆರೋಪ ಮಾಡುತ್ತಾ ಕೂರುವ ಬದಲು ನಮ್ಮ – ನಮ್ಮ ಅಂತರಂಗವನ್ನು ಅವಲೋಕಿಸಿಕೊಂಡು ಸತ್ಯ – ಶುದ್ಧ ಕಾಯಕದ ಬದುಕಿಗೆ ಶರಣು ಹೋದರೆ ಎಲ್ಲೆಡೆಯೂ ಭ್ರಷ್ಟಾಚಾರದಿಂದ ಮುಕ್ತವಾದ ಶಾಂತಿ ಮತ್ತು ಸಮೃದ್ಧಿಯ ವಾತಾವರಣ ನಿರ್ಮಾಣವಾಗಬಲ್ಲದು. ನಮ್ಮ ಭವ್ಯ ಭಾರತದ ಇತಿಹಾಸವನ್ನು ಮಕ್ಕಳಿಗೆ ತಿಳಿಸಿಕೊಡುವ ಮೂಲಕ ಅವರಲ್ಲಿ ಉತ್ತಮ ಚಿಂತನೆ ಮತ್ತು ಸಂಸ್ಕಾರಗಳನ್ನು ತುಂಬಬೇಕಿದೆ ಎಂದ ಅವರು, ಪ್ರೀತಿಯೊಂದೇ ಇಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂದು ನುಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಶಿಕ್ಷಕರಾದ ಶಂಭುಲಿಂಗಪ್ಪ ಮಾತನಾಡಿ, ಧರ್ಮಗ್ರಂಥ ಮತ್ತು ಮಾತಿಗೆ ಮಾತ್ರ ಸೀಮಿತವಾಗದೆ ವಾಸ್ತವದ ಬದುಕಿನಲ್ಲಿ ನಾವು ಮಾನವೀಯ ಮೌಲ್ಯಗಳು ಅಳವಡಿಸಿಕೊಂಡು ಬದುಕಬೇಕಿದೆ ಎಂದರು.
ಗಾಯಕಿ ಪಾರ್ವತಮ್ಮ ಮಾನವೀಯ ಮೌಲ್ಯ ಸಾರುವಂತಹ ಗೀತೆಗಳಿಗೆ ಧ್ವನಿಯಾದರು. ಸಂಸ್ಥೆಯ ಸಂಸ್ಥಾಪಕರಾದ ಶಿವಕುಮಾರ್ ಕುರ್ಕಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ7 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ7 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ7 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ7 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ7 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ