ಕ್ರೀಡೆ
ಗವಾಸ್ಕರ್ ಟೆಸ್ಟ್ ಸರಣಿ : ಆಸ್ಟ್ರೇಲಿಯಾ ವಿರುದ್ಧ ಭಾರತ 250 ರನ್

ಸುದ್ದಿದಿನ ಡೆಸ್ಕ್ : ಅಡಿಲೇಡ್ ಅಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಮೊದಲ ಇನ್ನಿಂಗ್ಸ್ ಭಾರತ 88 ಓವರ್‍ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 250 ರನ್‍ಗಳಿಸಿದೆ.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು ಊಟದ ವಿರಾಮದ ವೇಳೆಗೆ 27 ಓವರ್‍ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 57 ರನ್‍ಗಳಿಸಿದೆ.
ಉಸ್ಮಾನಾ ಖವಾಜಾ 21 ರನ್ ಮತ್ತು ಶೌನ್ ಮಾರ್ಸ್ 1 ರನ್‍ಗಳಿಸಿ ಕ್ರೀಸ್‍ನಲ್ಲಿದ್ದಾರೆ. ಇಶಾಂತ್ ಶರ್ಮಾ-1 ರವಿಚಂದ್ರ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿಕೆಟ್ ಕಿತ್ತ ಭಾರತ ಆಟಗಾರರ ಸಂಭ್ರಮ ಚಿತ್ರ ಕೃಪೆ
ಬಿಸಿಸಿಐ ಟ್ವಿಟರ್
A wicket third ball for Ishant Sharma. #TeamIndia 250, Australia 11/1 at the moment #AUSvIND pic.twitter.com/pHHx0ZYvqf
— BCCI (@BCCI) December 7, 2018
ನಿನ್ನೆ ಬ್ಯಾಟಿಂಗ್ ಆರಂಭಿಸಿದ ಭಾರತ ಪೂಜಾರಾ ಅವರ ಶತಕ (123) ಮತ್ತು ರೋಹಿತ್ ಶರ್ಮಾ, ರಿಷಭ್ ಪಂತ್ ಮತ್ತು ಆರ್. ಅಶ್ವಿನ್ ಅವರ ಉತ್ತಮ ಆಟದ ನೆರವಿನಿಂದ ಭಾರತ ಮೊದಲ ದಿನ 87.5 ಓವರ್‍ಗಳಲ್ಲಿ 9 ವಿಕೆಟ್ ಕಳೆದುಕೊಂಡು 250 ರನ್‍ಗಳಿಸಿತ್ತು. ಇಂದು ಎದುರಿಸಿದ ಒಂದೇ ಎಸೆತದಲ್ಲಿ ಶಮಿ ಔಟಾಗುವ ಮೂಲಕ ಭಾರತ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿತು.
ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತ್ತು. ಉತ್ತಮ ಇನ್ನಿಂಗ್ಸ್ ಕಟ್ಟಬೇಕು ಎನ್ನುವ ಭಾರತ ತಂಡದ ಯೋಜನೆ ಆರಂಭದಲ್ಲೇ ವಿಫಲವಾಯಿತು. 2ನೇ ಓವರ್ ಚಾಲ್ತಿಯಲಿದ್ದಾಗ ತಂಡ ಮೂರು ರನ್‍ಗಳಿಸಿದ್ದಾಗ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ (2 ರನ್) ಹ್ಯಾಜಲ್‍ವುಡ್‍ಗೆ ವಿಕೆಟ್ ಒಪ್ಪಿಸುವುದರೊಂದಿಗೆ ವಿಕೆಟ್ ಪತನಕ್ಕೆ ನಾಂದಿ ಹಾಡಿದರು.
Ash strikes. Gets the 2nd for #TeamIndia #AUSvIND pic.twitter.com/B9J6IkGEU3
— BCCI (@BCCI) December 7, 2018
ಬಳಿಕ ಕ್ರೀಸ್‍ಗೆ ಬಂದ ಚೇತೇಶ್ವರ ಪೂಜಾರಾ ಅವರ ಮುರುಳಿ ವಿಜಯ್‍ಗೆ ಜತೆಯಾದರು. ಆದರೆ, ಮೊದಲ ಮೊತ್ತಕ್ಕೆ 12 ರನ್ ಸೇರಿಸುವಷ್ಟರಲ್ಲಿ ಮುರುಳಿ ವಿಜಯ್ (11 ರನ್) ಸ್ಟಾರ್ಕ್‍ಗೆ ವಿಕೆಟ್ ಒಪ್ಪಿಸಿದರು.
ನಾಯಕ ವಿರಾಟ್ ಕೊಹ್ಲಿ ತಂಡವನ್ನು ಅಪಾಯದಿಂದ ಪಾರು ಮಾಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ತಂಡದ ಮೊತ್ತಕ್ಕೆ ನಾಲ್ಕು ರನ್ ಸೇರುವಷ್ಟರಲ್ಲಿ ಮೂರು ರನ್‍ಗಳಿಸಿದ ಕೊಹ್ಲಿ ಕುಮಿನ್ಸ್‍ಗೆ ವಿಕೆಟ್ ನೀಡಿ ಮರಳಿದರು.
ಅಂಜಿಕ್ಯ ರಹಾನೆ ಮತ್ತು ಪೂಜಾರಾ ಸ್ವಲ್ಪ ಚೇತರಿಕೆಯ ಆಟ ಆಡಿದಂತೆ ಕಂಡುಬಂದರು. ಆದರೆ ಕಾಂಗರೂ ನಾಡಿ ಬೌಲರ್‍ಗಳು ಅದಕ್ಕೆ ಅವಕಾಶ ನೀಡಲಿಲ್ಲ. 13 ರನ್‍ಗಳಿಸಿದ ರಹಾನೆ ಅವರನ್ನು ಹ್ಯಾಜಲ್‍ವುಡ್ ಪೆವಿಲಿಯನ್‍ಗೆ ಕಳುಹಿಸಿದರು.
ಹೀಗೆ ಒಂದೆಡೆ ವಿಕೆಟ್‍ಗಳು ಪತನವಾಗುತ್ತಿದ್ದರೆ ಇನ್ನೊಂದೆಡೆ ಪೂಜಾರಾ ಭದ್ರವಾಗಿ ನೆಲೆಯೂರಿದ್ದರು. ಅತಿಥೇಯರ ವೇಗ ಮತ್ತು ಸ್ಪಿನ್ ಬಾಲ್‍ಗಳಿಗೆ ಸಂಯಮದಿಂದಲೇ ಉತ್ತರಿಸಿದರು.
ತಾಳ್ಮೆಯ ಅಟವಾಡುತ್ತಿದ್ದ ಪೂಜಾರಾಗೆ ಐದನೇ ವಿಕೆಟ್‍ಗೆ ರೋಹಿತ್ ಶರ್ಮಾ, ಆರನೇ ವಿಕೆಟ್‍ಗೆ ರಿಷಭ್ ಪಂತ್ ಮತ್ತು 7ನೇ ವಿಕೆಟ್‍ಗೆ ಆರ್ ಅಶ್ವಿನ್ ಅವರು ಉತ್ತಮ ಸಾಥ್ ನೀಡಿದ್ದರಿಂದ ತಂಡದ ಪ್ರದರ್ಶನ ಚೇತರಿಕೆಯ ಹಾದಿಯಲ್ಲಿತ್ತು.
Good Review from #TeamIndia as Ashwin picks his 3rd. Australia 87/4 at the moment #AUSvIND pic.twitter.com/TJaSvd20iY
— BCCI (@BCCI) December 7, 2018
ವಿಕೆಟ್ ಹೋಗುತ್ತಿದ್ದರೂ ಯಾವುದೇ ಒತ್ತಡಕ್ಕೆ ಒಳಗಾಗದ ಪೂಜಾರಾ ಅವರು ಅಡಿಲೇಡ್ ಅಂಗಳದಲ್ಲಿ ಪೂಜಾರಾ ಶತಕ ಬಾರಿ ಸಂಭ್ರಮಿಸಿ, ಭಾರತದ ಪಾಲಿನ ಹಿರೋ ಎನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ3 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ2 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ5 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ6 hours ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ