Connect with us

ಕ್ರೀಡೆ

ಗವಾಸ್ಕರ್ ಟೆಸ್ಟ್ ಸರಣಿ : ಆಸ್ಟ್ರೇಲಿಯಾ ವಿರುದ್ಧ ಭಾರತ 250 ರನ್

Published

on

ಸುದ್ದಿದಿನ ಡೆಸ್ಕ್ : ಅಡಿಲೇಡ್ ಅಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಮೊದಲ ಇನ್ನಿಂಗ್ಸ್ ಭಾರತ 88 ಓವರ್‍ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 250 ರನ್‍ಗಳಿಸಿದೆ.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು ಊಟದ ವಿರಾಮದ ವೇಳೆಗೆ 27 ಓವರ್‍ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 57 ರನ್‍ಗಳಿಸಿದೆ.

ಉಸ್ಮಾನಾ ಖವಾಜಾ 21 ರನ್ ಮತ್ತು ಶೌನ್ ಮಾರ್ಸ್ 1 ರನ್‍ಗಳಿಸಿ ಕ್ರೀಸ್‍ನಲ್ಲಿದ್ದಾರೆ. ಇಶಾಂತ್ ಶರ್ಮಾ-1 ರವಿಚಂದ್ರ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿಕೆಟ್ ಕಿತ್ತ ಭಾರತ ಆಟಗಾರರ ಸಂಭ್ರಮ ಚಿತ್ರ ಕೃಪೆ

ಬಿಸಿಸಿಐ ಟ್ವಿಟರ್

ನಿನ್ನೆ ಬ್ಯಾಟಿಂಗ್ ಆರಂಭಿಸಿದ ಭಾರತ ಪೂಜಾರಾ ಅವರ ಶತಕ (123) ಮತ್ತು ರೋಹಿತ್ ಶರ್ಮಾ, ರಿಷಭ್ ಪಂತ್ ಮತ್ತು ಆರ್. ಅಶ್ವಿನ್ ಅವರ ಉತ್ತಮ ಆಟದ ನೆರವಿನಿಂದ ಭಾರತ ಮೊದಲ ದಿನ 87.5 ಓವರ್‍ಗಳಲ್ಲಿ 9 ವಿಕೆಟ್ ಕಳೆದುಕೊಂಡು 250 ರನ್‍ಗಳಿಸಿತ್ತು. ಇಂದು ಎದುರಿಸಿದ ಒಂದೇ ಎಸೆತದಲ್ಲಿ ಶಮಿ ಔಟಾಗುವ ಮೂಲಕ ಭಾರತ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿತು.

ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತ್ತು. ಉತ್ತಮ ಇನ್ನಿಂಗ್ಸ್ ಕಟ್ಟಬೇಕು ಎನ್ನುವ ಭಾರತ ತಂಡದ ಯೋಜನೆ ಆರಂಭದಲ್ಲೇ ವಿಫಲವಾಯಿತು. 2ನೇ ಓವರ್ ಚಾಲ್ತಿಯಲಿದ್ದಾಗ ತಂಡ ಮೂರು ರನ್‍ಗಳಿಸಿದ್ದಾಗ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ (2 ರನ್) ಹ್ಯಾಜಲ್‍ವುಡ್‍ಗೆ ವಿಕೆಟ್ ಒಪ್ಪಿಸುವುದರೊಂದಿಗೆ ವಿಕೆಟ್ ಪತನಕ್ಕೆ ನಾಂದಿ ಹಾಡಿದರು.

ಬಳಿಕ ಕ್ರೀಸ್‍ಗೆ ಬಂದ ಚೇತೇಶ್ವರ ಪೂಜಾರಾ ಅವರ ಮುರುಳಿ ವಿಜಯ್‍ಗೆ ಜತೆಯಾದರು. ಆದರೆ, ಮೊದಲ ಮೊತ್ತಕ್ಕೆ 12 ರನ್ ಸೇರಿಸುವಷ್ಟರಲ್ಲಿ ಮುರುಳಿ ವಿಜಯ್ (11 ರನ್) ಸ್ಟಾರ್ಕ್‍ಗೆ ವಿಕೆಟ್ ಒಪ್ಪಿಸಿದರು.

ನಾಯಕ ವಿರಾಟ್ ಕೊಹ್ಲಿ ತಂಡವನ್ನು ಅಪಾಯದಿಂದ ಪಾರು ಮಾಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ತಂಡದ ಮೊತ್ತಕ್ಕೆ ನಾಲ್ಕು ರನ್ ಸೇರುವಷ್ಟರಲ್ಲಿ ಮೂರು ರನ್‍ಗಳಿಸಿದ ಕೊಹ್ಲಿ ಕುಮಿನ್ಸ್‍ಗೆ ವಿಕೆಟ್ ನೀಡಿ ಮರಳಿದರು.

ಅಂಜಿಕ್ಯ ರಹಾನೆ ಮತ್ತು ಪೂಜಾರಾ ಸ್ವಲ್ಪ ಚೇತರಿಕೆಯ ಆಟ ಆಡಿದಂತೆ ಕಂಡುಬಂದರು. ಆದರೆ ಕಾಂಗರೂ ನಾಡಿ ಬೌಲರ್‍ಗಳು ಅದಕ್ಕೆ ಅವಕಾಶ ನೀಡಲಿಲ್ಲ. 13 ರನ್‍ಗಳಿಸಿದ ರಹಾನೆ ಅವರನ್ನು ಹ್ಯಾಜಲ್‍ವುಡ್ ಪೆವಿಲಿಯನ್‍ಗೆ ಕಳುಹಿಸಿದರು.

ಹೀಗೆ ಒಂದೆಡೆ ವಿಕೆಟ್‍ಗಳು ಪತನವಾಗುತ್ತಿದ್ದರೆ ಇನ್ನೊಂದೆಡೆ ಪೂಜಾರಾ ಭದ್ರವಾಗಿ ನೆಲೆಯೂರಿದ್ದರು. ಅತಿಥೇಯರ ವೇಗ ಮತ್ತು ಸ್ಪಿನ್ ಬಾಲ್‍ಗಳಿಗೆ ಸಂಯಮದಿಂದಲೇ ಉತ್ತರಿಸಿದರು.

ತಾಳ್ಮೆಯ ಅಟವಾಡುತ್ತಿದ್ದ ಪೂಜಾರಾಗೆ ಐದನೇ ವಿಕೆಟ್‍ಗೆ ರೋಹಿತ್ ಶರ್ಮಾ, ಆರನೇ ವಿಕೆಟ್‍ಗೆ ರಿಷಭ್ ಪಂತ್ ಮತ್ತು 7ನೇ ವಿಕೆಟ್‍ಗೆ ಆರ್ ಅಶ್ವಿನ್ ಅವರು ಉತ್ತಮ ಸಾಥ್ ನೀಡಿದ್ದರಿಂದ ತಂಡದ ಪ್ರದರ್ಶನ ಚೇತರಿಕೆಯ ಹಾದಿಯಲ್ಲಿತ್ತು.

ವಿಕೆಟ್ ಹೋಗುತ್ತಿದ್ದರೂ ಯಾವುದೇ ಒತ್ತಡಕ್ಕೆ ಒಳಗಾಗದ ಪೂಜಾರಾ ಅವರು ಅಡಿಲೇಡ್ ಅಂಗಳದಲ್ಲಿ ಪೂಜಾರಾ ಶತಕ ಬಾರಿ ಸಂಭ್ರಮಿಸಿ, ಭಾರತದ ಪಾಲಿನ ಹಿರೋ ಎನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

Published

on

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್‌ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.

ನಿನ್ನೆ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.

ಅಸಾಧಾರಣ ಬೌಲಿಂಗ್‌ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್‌ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.

ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ

17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್‌ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.

ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

‘ಮತದಾರ ದೇವರು’ ಎಂದ‌ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ...

ದಿನದ ಸುದ್ದಿ3 days ago

ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ,...

ದಿನದ ಸುದ್ದಿ4 days ago

ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು...

ದಿನದ ಸುದ್ದಿ5 days ago

ವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ : ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ 2006 ರಿಂದ 2025ರ ಅವಧಿಯಲ್ಲಿ ಅಧ್ಯಯನ ಮಾಡಿರುವ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳ...

ದಿನದ ಸುದ್ದಿ6 days ago

ದಾವಣಗೆರೆ | ಇಂದು ಕರೆಂಟ್ ಇರಲ್ಲ

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00...

ದಿನದ ಸುದ್ದಿ1 week ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ1 week ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ1 week ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ1 week ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ2 weeks ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

Trending